News Karnataka Kannada
Tuesday, April 23 2024
Cricket
ಕಾಸರಗೋಡು

ಏ.13ರಿಂದ ಎಡನೀರು ಮಠಾಧೀಶರಿಂದ ಮಧೂರಿನ ಸಿದ್ಧಿವಿನಾಯಕ ದೇಗುಲಕ್ಕೆ ಪಾದಯಾತ್ರೆ

Eada Neeru
Photo Credit :

 ಕಾಸರಗೋಡು: ಇತಿಹಾಸ ಪ್ರಸಿದ್ಧ ಕುಂಬಳೆ ಸೀಮೆಯ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಮಧೂರು ಕ್ಷೇತ್ರದಲ್ಲಿ ಮಾರ್ಚ್ 6ರಂದು ಆರಂಭಗೊಂಡ 48 ದಿನಗಳ ಮಂಡಲ ಭಜನಾ ಸಂಕೀರ್ತನೋತ್ಸವದ ಅಂಗವಾಗಿ ನಿತ್ಯ ಭಜನಾ ಕಾರ್ಯಕ್ರಮವು ಯಶಸ್ವಿಯಾಗಿ ಮುನ್ನಡೆಯುತ್ತಿದೆ.

ಎಡನೀರು ಮಠಾಧೀಶ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ದೀಪ ಬೆಳಗಿಸಿ ಚಾಲನೆ ನೀಡಲಿದ್ದಾರೆ. ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನೆರವೇರುತ್ತಿರುವ ಈ ಪುಣ್ಯ ಕಾರ್ಯದಲ್ಲಿ ಉಪ್ಪಳ ಕೊಂಡೆವೂರು ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಏಪ್ರಿಲ್ 12ರಂದು ಪಾಲ್ಗೊಂಡು ಆಶೀರ್ವಚನ ನೀಡಲಿದ್ದಾರೆ.

ಅಲ್ಲದೆ ಏಪ್ರಿಲ್ 13ರಂದು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಪಾದಯಾತ್ರೆಯ ಮೂಲಕ ಮಧೂರಿಗೆ ಹೊರಟು ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸ್ವಾಮೀಜಿಯವರು ಎಡನೀರಿನಿಂದ ಬೆಳಗ್ಗೆ 6 ಗಂಟೆಗೆ ಪಾದಯಾತ್ರೆ ಆರಂಭಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಭಕ್ತಜನರು ಭಾಗವಹಿಸಿ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಲಾಗಿದೆ. ಏಪ್ರಿಲ್ 19ರಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರು ಮಧೂರು ಕ್ಷೇತ್ರಕ್ಕೆ ಚಿತ್ತೈಸಿ ಆಶೀರ್ವಚನ ನೀಡುವರು.

2023ರಲ್ಲಿ ಮಧೂರು ದೇವಾಲಯದ ಬ್ರಹ್ಮಕಲಶೋತ್ಸವ ನಡೆಸುವ ದೃಢ ಸಂಕಲ್ಪದೊಂದಿಗೆ ಕ್ಷೇತ್ರದ ನವೀಕರಣ ಕಾಮಗಾರಿಗಳು ತ್ವರಿತಗತಿಯಲ್ಲಿ ಸಾಗುತ್ತಿವೆ. ಈ ಸಂಕಲ್ಪ ಸಾಕಾರಗೊಳ್ಳುವ ನಿಟ್ಟಿನಲ್ಲಿ ಭಜನಾ ಕಾರ್ಯಕ್ರಮವು ಪ್ರೇರಣೆಯಾಗಲಿ ಎಂಬುದು ಸ್ವಾಮೀಜಿಯವರ ಹಾರೈಕೆಯಾಗಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು