News Karnataka Kannada
Sunday, April 21 2024
Cricket
ಕಾಸರಗೋಡು

ಕಾಸರಗೋಡು : ನಿಯಂತ್ರಣ ತಪ್ಪಿ ಕಾರು ಬಾವಿಗೆ

Kasargod
Photo Credit :

ಕಾಸರಗೋಡು : ನಿಯಂತ್ರಣ ತಪ್ಪಿದ ಕಾರು ಬಾವಿಗೆ ಬಿದ್ದ ಘಟನೆ ಬೇಕಲ ಸಮೀಪದ ಪೂಚಕ್ಕಾಡ್  ಎಂಬಲ್ಲಿ  ಇಂದು ಸಂಜೆ ನಡೆದಿದ್ದು , ಕಾರಲ್ಲಿದ್ದ ನಾಲ್ವರು    ಪವಾಡ ಸದೃಶ ವಾಗಿ ಪಾರಾಗಿದ್ದಾರೆ .

ಸಂಜೆ ಐದು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಾವಿಯಲ್ಲಿ ಸಿಲುಕಿದ್ದ  ನಾಲ್ವರನ್ನು ಪರಿಸರವಾಸಿಗಳು ಹಾಗೂ ಅಗ್ನಿಶಾಮಕ ದಳದ ಸಿಬಂದಿಗಳು ಮೇಲಕ್ಕೆತ್ತಿ ರಕ್ಷಿಸಿದರು.

ಅತೀ ವೇಗದಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ  ರಸ್ತೆ ಬದಿಯ ಆವರಣ ಇಲ್ಲದ ಬಾವಿಗೆ ಬಿದ್ದಿದ್ದು , ಇದನ್ನು ಗಮನಿಸಿದ ಪರಿಸರವಾಸಿಗಳು  ಕೂಡಲೇ ಕಾರ್ಯಾಚರಣೆ ನಡೆಸಿದ್ದು , ಮೂವರನ್ನು ಪರಿಸರದ ಯುವಕರು   ಕಾರಿನಿಂದ ಹೊರತೆಗೆದು ಮೇಲಕ್ಕೆತ್ತಿದರು.

ಓರ್ವನನ್ನು ಅಗ್ನಿಶಾಮಕ ದಳದ ಸಿಬಂದಿಗಳು   ರಕ್ಷಿಸಿದರು . ಬಾವಿಗೆ ಬಿದ್ದ ಕಾರು ಅರ್ಧ ಮುಳುಗಿದ ಸ್ಥಿತಿಯಲ್ಲಿತ್ತು . ಕಾರಿನ ಗಾಜು ಹಾಗೂ ಬಾಗಿಲು ಒಡೆದು ನಾಲ್ವರನ್ನು ಹೊರೆತೆಗೆದು ಮೇಲಕ್ಕೆ ತಂದು ರಕ್ಷಿಸಲಾಯಿತು .  ಕಾರಲ್ಲಿದ್ದವರು  ಉದುಮ ನಿವಾಸಿ ಗಳಾಗಿದ್ದಾರೆ . ಕಾರನ್ನು ಕ್ರೇನ್ ಬಳಸಿ ಹೊರತೆಗೆಯಲಾಯಿತು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು