News Karnataka Kannada
Monday, April 15 2024
Cricket
ಕಾಸರಗೋಡು

ವಿದ್ಯುತ್ ತಂತಿ ತಗುಲಿ ಕಾಂಗ್ರೆಸ್ ಮುಖಂಡ ಸಾವು

Dead
Photo Credit : News Kannada

ಕಾಸರಗೋಡು : ಕಡಿದು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕಾಂಗ್ರೆಸ್ ಮುಖಂಡರೋರ್ವರು ಮೃತಪಟ್ಟ ದಾರುಣ ಘಟನೆ ಬುಧವಾರ ಸಂಜೆ ಕಾಞ೦ಗಾಡ್ನ ಮಣಿಯಾಟ್ ನಲ್ಲಿ ನಡೆದಿದೆ.

ಕಾಞ೦ಗಾಡ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ . ವಿ ಬಾಲಕೃಷ್ಣನ್ ( ೬೪) ಮೃತಪಟ್ಟವರು. ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ರಸ್ತೆಯಲ್ಲಿ ಕಡಿದು ಬಿದ್ದಿದ್ದ ತಂತಿ ತಗಲಿ ದುರ್ಘಟನೆ ನಡೆದಿದೆ. ಸಂಜೆ ಭಾರೀ ಗಾಳಿಗೆ ವಿದ್ಯುತ್ ತಂತಿ ಕಡಿದು ಬಿದ್ದಿದ್ದು ಈ ರಸ್ತೆಯಾಗಿ ಬರುತ್ತಿದ್ದ ಬಾಲಕೃಷ್ಣ ಅವರ ಸ್ಕೂಟರ್  ತಂತಿ ತಗುಲಿ ಈ  ದಾರುಣ  ಘಟನೆ ನಡೆದಿದೆ. ಜೊತೆಗಿದ್ದ ಮೊಮ್ಮಗಳು ಅಪಾಯದಿಂದ ಪಾರಾಗಿದ್ದಾರೆ , ಬಾಲಕೃಷ್ಣನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗಳ ಮನೆಗೆ ಬಂದು ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು