ಕಾಞಂಗಾಡು ನಗರಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು

ಕಾಸರಗೋಡು : ಕಾಞಂಗಾಡು ನಗರಸಭೆಯ 30 ವಾರ್ಡ್ ಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಕೆ . ಕೆ ಬಾಬು ತಮ್ಮ ಸಮೀಪದ ಪ್ರತಿಸ್ಪರ್ಧಿ ಸಿಪಿಎಂ ನ ಕೆ . ಸುಹಾಸ್ ರವರನ್ನು 116 ಮತಗಳ ಅಂತರದಿಂದ ಸೋಲಿಸಿದರು. ಬಿಜೆಪಿ ಮೂರನೇ ಸ್ಥಾನಕ್ಕೆ ತೃ ಪ್ತಿ ಪಟ್ಟುಕೊಂಡಿತು. ಕೆ . ಕೆ. ಬಾಬು 417 ಮತ ಪಡೆದರೆ ಸುಹಾಸ್ 301 ಮತಗಳನ್ನು ಪಡೆದರು. ಬಿಜೆಪಿಯ ಟಿ . ವಿ ಪ್ರಶಾಂತ್ 248 ಮತಗಳನ್ನು ಪಡೆದರು.

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ . ಪಿ ಮಧು ಕೇವಲ ಏಳು ಮತಗಳನ್ನಷ್ಟೇ ಪಡೆದರು . ಕಾಂಗ್ರೆಸ್ ಸದಸ್ಯರಾಗಿದ್ದ ಬಿನೀಶ್ ರಾಜ್ ರವರ ನಿಧನದ ಹಿನ್ನಲೆಯಲ್ಲಿ ಮಂಗಳವಾರ ಉಪ ಚುನಾವಣೆ ನಡೆದಿತ್ತು. 1,220 ಮಂದಿಯಲ್ಲಿ 985 ಮಂದಿ ಮತ ಚಲಾಯಿಸಿದ್ದರು. ಬುಧವಾರ ಬೆಳಿಗ್ಗೆ ನಗರಸಭಾ ಸಭಾಂಗಣದಲ್ಲಿ ಮತ ಎಣಿಕೆ ನಡೆಯಿತು.

Gayathri SG

Recent Posts

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

6 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

21 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

43 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

1 hour ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

2 hours ago