ಕಾಸರಗೋಡು : ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಒಂದೇ ಶಾಲೆಯ 7 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ಡಿವೈಎಸ್ಪಿ ಸಿ.ಕೆ. ಸುನಿಲ್ ಕುಮಾರ್ ನೇತೃತ್ವದಲ್ಲಿ ತನಿಖೆ ಪ್ರಾರಂಭಗೊಂಡಿದೆ.
ಮೂವರು ವಿದ್ಯಾರ್ಥಿಗಳು ನೀಡಿದ ದೂರಿನಂತೆ ನಾಲ್ವರ ವಿರುದ್ಧ ಬೇಕಲ ಪೊಲೀಸರು ಪೋಕ್ಸೋ ಕೇಸು ದಾಖಲಿಸಿಕೊಂಡಿದ್ದಾರೆ. ಇತರ ವಿದ್ಯಾರ್ಥಿನಿಯರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಶಾಲೆಯಲ್ಲಿ ನಡೆದ ಪೋಕ್ಸೋ ಕುರಿತಾದ ಮಾಹಿತಿ ಶಿಬಿರದಲ್ಲಿ 7 ವಿದ್ಯಾರ್ಥಿನಿಯರಿಗೆ ನಡೆದ ಲೈಂಗಿಕ ಕಿರುಕುಳ ಬಯಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.