ಕಾಸರಗೋಡು : ಜಿಲ್ಲೆಯಲ್ಲಿ ಬುಧವಾರ ರಾತ್ರಿ ಗುಡುಗು ಮಿಂಚು ಗಾಳಿ ಸಹಿತ ಭಾರೀ ಮಳೆಯಾಗಿದೆ . ಗಾಳಿಯ ಅಬ್ಬರಕ್ಕೆ ಹಲವೆಡೆ ಮರಗಳು ಬಿದ್ದಿವೆ. ವಿದ್ಯುತ್ ಸಂಪರ್ಕ ಅಸ್ತವ್ಯಸ್ತ ಗೊಂಡಿದೆ. ಬಹುತೇಕ ಕಡೆಗಳಲ್ಲಿ ರಾತ್ರಿಯಿಂದ ವಿದ್ಯುತ್ ಮೊಟಕು ಗೊಂಡಿದೆ.
ರಾಷ್ಟ್ರೀಯ ಹೆದ್ದಾರಿ ಕುಂಬಳೆ ಮೊಗ್ರಾಲ್ ಸಮೀಪ ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಮರ ಉರುಳಿ ಬಿದ್ದ ಘಟನೆ ನಡೆದಿದೆ. ಚಾಲಕ ಅಪಾಯ ದಿಂದ ಪಾರಾಗಿದ್ದಾರೆ. ಮರ ಉರುಳಿ ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಗಂಟೆಗೂ ಅಧಿಕ ಕಾಲ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿತ್ತು. ಹಲವು ಕಡೆಗಳಲ್ಲಿ ಕೃಷಿ ಹಾನಿಯೂ ಉಂಟಾಗಿದೆ ಕೆಲ ಮನೆ ಗಾಳಿಗೂ ಹಾನಿ ಉಂಟಾಗಿದೆ.