ಕಾಸರಗೋಡು: ಜಿಲ್ಲೆಯಲ್ಲಿ ಭಾನುವಾರ 159 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 150 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 156 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.
ಕೇರಳದಲ್ಲಿ 8538 ಹೊಸ ಪ್ರಕರಣ
ಕೇರಳದಲ್ಲಿ ಭಾನುವಾರ ಹೊಸದಾಗಿ 8538 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 8212 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 11,366 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 71 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶನಿವಾರ ಶೇಕಡಾ 11.86 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.