ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ 141 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 136 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 78 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಒಂದು ಸಾವು ಸಂಭವಿಸಿದೆ.
ಕೇರಳದಲ್ಲಿ 7643 ಹೊಸ ಪ್ರಕರಣ
ಕೇರಳದಲ್ಲಿ ಮಂಗಳವಾರ ಹೊಸದಾಗಿ 7643 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 7166 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 10,488 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 77 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಮವಾರ ಶೇಕಡಾ 9.72 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.