ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 54 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 46 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 41 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಲಿಲ್ಲ.
ಕೇರಳದಲ್ಲಿ 2434 ಹೊಸ ಪ್ರಕರಣ
“ಕೇರಳದಲ್ಲಿ ಸೋಮವಾರ ಹೊಸದಾಗಿ 2434 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 2266 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 4308 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 38 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಭಾನುವಾರ ಶೇಕಡಾ 6.87 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.