ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 166 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 155 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 78 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಇಬ್ಬರು ಸಾವಿಗೀಡಾದರು.
ಕೇರಳದಲ್ಲಿ 6996 ಹೊಸ ಪ್ರಕರಣ
ಕೇರಳದಲ್ಲಿ ಸೋಮವಾರ ಹೊಸದಾಗಿ 6996 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 6588 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 16,576 ಜನರು ಗುಣಮುಖರಾಗಿದ್ದಾರೆ.
ಈ ಮಧ್ಯೆ ಕೇರಳದಲ್ಲಿ 84 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಭಾನುವಾರ ಶೇಕಡಾ 11.77 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.