ಕಾಸರಗೋಡು: ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಟಿಪ್ಪರ್ ಲಾರಿ ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯ ಸಬ್ಬಯ್ಯಕಟ್ಟೆ ಯಲ್ಲಿ ನಡೆದಿದೆ.ಸುಬ್ಬಯ್ಯ ಕಟ್ಟೆ ನೀರ್ಪಾಂತಿಯ ರಾಜ್ ಕುಮಾರ್ (50) ಮೃತಪಟ್ಟವರು .
ಆದಿತ್ಯ ವಾರ ಮನೆಯಿಂದ ತೆರಳಿದ್ದ ರಾಜ್ ಕುಮಾರ್ ನಾಪತ್ತೆ ಯಾಗಿದ್ದು, ಈ ಬಗ್ಗೆ ಕುಂಬಳೆ ಪೊಲೀಸರಿಗೂ ದೂರು ನೀಡಲಾಗಿತ್ತು. ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಈ ನಡುವೆ ಶೋಧ ನಡೆಸಿದಾಗ ಮನೆಯ ಅಲ್ಪ ದೂರದ ಮರ ವೊಂದರಲ್ಲಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಬಿಟ್ಟು ಕೊಡಲಾಯಿತು.