ಕಾಸರಗೋಡು: ಬೈಕ್ ಮತ್ತು ಟೆಂಪೋ ಅಪಘಾತ ಇಬ್ಬರು ಮೃತ

ಕಾಸರಗೋಡು:  ಬೈಕ್ ಮತ್ತು ಟೆಂಪೋ ಉಂಟಾದ ಅಪಘಾತದಲ್ಲಿ ಇಬ್ಬರು ಮೃತ ಪಟ್ಟ ಘಟನೆ  ಬುಧವಾರ ರಾತ್ರಿ ಮೇಲ್ಪರಂಬ  ಠಾಣಾ ವ್ಯಾಪ್ತಿಯ ಕಳ್ನಾಡ್ ಪೇಟೆಯಲ್ಲಿ ನಡೆದಿದೆ.

ಪೆರಿಯ  ನಡುವೆಟ್ಟುಪಾರದ  ಎನ್ . ಎ  ಪ್ರಜೀಶ್  ( ೨೧) ಮತ್ತು ಪಳ್ಳಿಕೆರೆ ಸಿ . ಎಚ್ ನಗರದ ಅನಿಲ್ ( ೨೪)  ಮೃತಪಟ್ಟವರು.
ಅನಿಲ್  ರೂಫಿಂಗ್ ಕಾರ್ಮಿಕ ಹಾಗೂ ಪ್ರಜೀಶ್  ಪೈಂಟಿಂಗ್ ಕಾರ್ಮಿಕ ರಾ ಗಿದ್ದನು ಅನಿಲ್ ಘಟನಾ ಸ್ಥಳದಲ್ಲಿ ಹಾಗೂ ಪ್ರಜೀಶ್ ಕಾಸರಗೋಡು  ಆಸ್ಪತ್ರೆಯಲ್ಲಿ ಮೃತಪಟ್ಟರು.

ರಾತ್ರಿ ಹತ್ತು ಗಂಟೆ ಸುಮಾರಿಗೆ ಕಳ್ನಾಡ್  ಪೇಟೆಯ  ಸಮೀಪ  ಅಪಘಾತ ನಡೆದಿದ್ದು , ಇವರು ಸಂಚರಿಸುತ್ತಿದ್ದ ಬೈಕ್ ಗೆ  ಕಾಸರಗೋಡು ಕಡೆಯಿಂದ ಕಾಞ೦ಗಾಡ್ ನತ್ತ   ಮೀನು ಹೇರಿಕೊಂಡು ತೆರಳುತ್ತಿದ್ದ  ಟೆಂಪೋ ಡಿಕ್ಕಿ ಹೊಡೆದಿದೆ.

ಅಪಘಾತದ ಬಳಿಕ ಈ ರಸ್ತೆಯಲ್ಲಿ   ಹಲವು ಸಮಯ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿತ್ತ. ಮೇಲ್ಪರಂಬ ಠಾ ಣಾ  ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು , ಇಂದು ಬೆಳಿಗ್ಗೆ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ  ಬಿಟ್ಟುಕೊಡಲಾಗುವುದು ಎಂದು ಪೊಲೀಸರು  ತಿಳಿಸಿದ್ದಾರೆ

Swathi MG

Recent Posts

ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

3 mins ago

ಕೇರಳದ ಕೆಲವು ರಾಜ್ಯಗಳಿಗೆ ಮೇ 20 ರವರೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…

40 mins ago

ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್‌ ವಶಕ್ಕೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…

43 mins ago

5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…

57 mins ago

ರಾಹುಲ್, ಅಖಿಲೇಶ್ ಯಾದವ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕಾಲ್ತುಳಿತ

 ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…

57 mins ago

ಉತ್ತರ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು: ಭೋಜೇಗೌಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…

1 hour ago