News Karnataka Kannada
Monday, April 29 2024
ಕಾಸರಗೋಡು

ಕಾಸರಗೋಡು: ಮನೆಯಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ತಂಬಾಕು ಉತ್ಪನ್ನ ವಶ

Tambaku
Photo Credit : News Kannada

ಕಾಸರಗೋಡು: ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನಿರಿಸಲಾಗಿದ್ದ ಸುಮಾರು ಒಂದು ಕ್ವಿಂಟಾಲ್ ನಷ್ಟು ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಿದ್ಯಾನಗರ ಠಾಣಾ ಪೊಲೀಸರು ವಶಪಡಿಸಿ ಕೊಂಡಿದ್ದಾರೆ.

ಕಲ್ಲಕಟ್ಟ ಬಾಂಜರಮೂಲೆಯಲ್ಲಿ ಅಕ್ರಮ ತಂಬಾಕು ಉತ್ಪನ್ನ ದಾಸ್ತಾನಿನ ಬಗ್ಗೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದ್ದು, ಆರೋಪಿ ಬದ್ರುದ್ದೀನ್ ಪರಾರಿಯಾಗಿದ್ದಾನೆ.

ಬಾಡಿಗೆಗೆ ಮನೆ ಪಡೆದು ಪಾನ್ ಮಸಾಲ ಸೇರಿದಂತೆ ತಂಬಾಕು ಉತ್ಪನ್ನಗಳನ್ನು ಈತ ದಾಸ್ತಾನಿರಿಸಿ ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಪರಿಸರ ವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಇದರಂತೆ ಮಂಗಳವಾರ ಮಧ್ಯಾಹ್ನ ದಾಳಿ ನಡೆಸಿದ ಪೊಲೀಸರು ಮನೆಯಲ್ಲಿ ತಪಾಸಣೆ ನಡೆಸಿದಾಗ ಭಾರೀ ಪ್ರಮಾಣದ ಪಾನ್ ಮಸಾಲ ಹಾಗೂ ತಂಬಾಕು ಉತ್ಪನ್ನ ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು ಆರೋಪಿಗಾಗಿ ತನಿಖೆ ಆರಂಭಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು