ಕಾಸರಗೋಡು, ಫೆ.15 : ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಯುವಕನೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಅಣ೦ಗೂರು ಜೆ.ಪಿ.ಕಾಲನಿ ನಿವಾಸಿ ಜ್ಯೋತಿಷ್ (35) ಮೃತ ಯುವಕ. ಇವರು ಇಂದು ಬೆಳಗ್ಗೆ ಮನೆ ಸಮೀಪದ ಮರ ವೊಂದರ ರೆಂಬೆಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದ ಜ್ಯೋತಿಷ್ ಇಂದು ಬೆಳಗ್ಗೆ ಮನೆಯವರು ಗಮನಿಸಿದಾಗ ನಾಪತ್ತೆ ಯಾಗಿದ್ದು, ಹುಡುಕಾಡಿದಾಗ ಮೃತದೇಹ ಪತ್ತೆಯಾಗಿದೆ.
ಬಿಜೆಪಿ ಕಾರ್ಯಕರ್ತನಾಗಿದ್ದ ಜ್ಯೋತಿಷ್ ಬಂಗ್ರಗುಡ್ಡೆಯ ಸಿನಾನ್, ಸೂರ್ಲು ವಿನ ರಿಷಾದ್ ಹಾಗೂ ಕೊಲೆ ಪ್ರಕರಣದ ಆರೋಪಿಯಾಗಿದ್ದನ್ನಲ್ಲದೆ, ತಳಂಗರೆಯ ಜೈನುಲ್ ಆಬಿದ್ ಕೊಲೆ ಪ್ರಕರಣದಲ್ಲೂ ಈತ ಶಾಮೀಲಾಗಿರುವ ಆರೋಪ ಎದುರಿಸುತ್ತಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತ ದೇಹ ವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರ ಕ್ಕೆ ಕೊಂಡೊ ಯ್ಶಲಾಗಿದೆ. ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.