ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು, ಫೆ.15 : ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಯುವಕನೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಅಣ೦ಗೂರು ಜೆ.ಪಿ.ಕಾಲನಿ ನಿವಾಸಿ ಜ್ಯೋತಿಷ್ (35) ಮೃತ ಯುವಕ. ಇವರು ಇಂದು ಬೆಳಗ್ಗೆ ಮನೆ ಸಮೀಪದ ಮರ ವೊಂದರ ರೆಂಬೆಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದ ಜ್ಯೋತಿಷ್ ಇಂದು ಬೆಳಗ್ಗೆ ಮನೆಯವರು ಗಮನಿಸಿದಾಗ ನಾಪತ್ತೆ ಯಾಗಿದ್ದು, ಹುಡುಕಾಡಿದಾಗ ಮೃತದೇಹ ಪತ್ತೆಯಾಗಿದೆ.

ಬಿಜೆಪಿ ಕಾರ್ಯಕರ್ತನಾಗಿದ್ದ ಜ್ಯೋತಿಷ್ ಬಂಗ್ರಗುಡ್ಡೆಯ ಸಿನಾನ್, ಸೂರ್ಲು ವಿನ ರಿಷಾದ್ ಹಾಗೂ ಕೊಲೆ ಪ್ರಕರಣದ ಆರೋಪಿಯಾಗಿದ್ದನ್ನಲ್ಲದೆ, ತಳಂಗರೆಯ ಜೈನುಲ್ ಆಬಿದ್ ಕೊಲೆ ಪ್ರಕರಣದಲ್ಲೂ ಈತ ಶಾಮೀಲಾಗಿರುವ ಆರೋಪ ಎದುರಿಸುತ್ತಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತ ದೇಹ ವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರ ಕ್ಕೆ ಕೊಂಡೊ ಯ್ಶಲಾಗಿದೆ. ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

1 hour ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago