ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪಲ್ಟಿಯಾಗಿ ಚಾಲಕ ಸೇರಿದಂತೆ ಇಬ್ಬರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಅಡ್ಕತ್ತಬೈಲ್ ನಲ್ಲಿ ನಡೆದಿದೆ.
ಚಾಲಕ ನೌಶಾದ್ ಮತ್ತು ಕ್ಲೀನರ್ ಸುನಿಲ್ ಗಾಯ ಗೊಂಡವರು. ಇವರನ್ನು ಕಾಸರಗೋಡಿನ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಇಡುಕ್ಕಿ ಯಿಂದ ಪ್ಲೈವುಡ್ ಹೇರಿಕೊಂಡು ಪುಣೆಗೆ ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.
ಅಪಘಾತದ ಬಳಿಕ ಅಲ್ಪ ಸಮಯ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿತ್ತು.