ಕಾಸರಗೋಡು : ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತ ಪಟ್ಟ ಘಟನೆ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಆರಿಕ್ಕಾಡಿಯಲ್ಲಿ ನಡೆದಿದೆ.
ಮೊಗ್ರಾಲ್ ಪುತ್ತೂರಿನ ತನ್ಸಿಹಾ (17) ಮೃತ ಪಟ್ಟ ವಿದ್ಯಾರ್ಥಿ. ಕುಂಬಳೆಯ ಖಾಸಗಿ ಕಾಲೇಜಿನ ಪ್ಲಸ್ ವನ್ ವಿದ್ಯಾರ್ಥಿಯಾಗಿದ್ದನು.
ಉಪ್ಪಳ ದಿಂದ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯ ಗೊಂಡ ತನ್ಸಿಹಾ ನನ್ನು ಕುಂಬಳೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆ ಗೆ ಕೊಂಡೊಯ್ದ ರೂ ಚಿಕಿತ್ಸೆಗೆ ಸ್ಪಂದಿಸ ದೆ ಮೃತ ಪಟ್ಟರು. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ