ಕಾಸರಗೋಡು : ರಸ್ತೆ ಬದಿ ನಡೇದುಕೊಂಡು ಹೋಗುತ್ತಿದ್ದ ಯುವಕನೋರ್ವ ಬೈಕ್ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ.
ತೃಕ್ಕನ್ನಾಡ್ ನ ರತೀಶ್ ( 37) ಮೃತಪಟ್ಟವರು. ಮೀನು ಕಾರ್ಮಿಕರಾಗಿದ್ದರು .
ರಾತ್ರಿ ಮನೆಗೆ ತೆರಳುತ್ತಿದ್ದಾಗ ಕಾ ಞ೦ಗಾಡ್ ಕಡೆಗೆ ತೆರಳುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದ್ದು , ಗಂಭೀರ ಗಾಯಗೊಂಡ ರತೀಶ್ ರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.