ವೇತನ ವಿಳಂಬ:  ಕೆ ಎಸ್ ಆರ್ ಟಿ ಸಿ ನೌಕರರ ಮುಷ್ಕರ

ಕಾಸರಗೋಡು : ವೇತನ ವಿಳಂಬವನ್ನು ಪ್ರತಿಭಟಿಸಿ  ಕೆ ಎಸ್ ಆರ್ ಟಿ ಸಿ ನೌಕರರು ಶುಕ್ರವಾರ ಬಸ್ಸು ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸಿದರು.

ಕಾಸರಗೋಡು ಡಿಫೋ ದಿಂದ ನಾಲ್ಕು ಬಸ್ಸು ಗಳು ಮಾತ್ರ ಸಂಚಾರ ನಡೆಸಿದವು. ಬಸ್ಸು ಮುಷ್ಕರದಿಂದ ಪ್ರಯಾಣಿಕರು ಸಮಸ್ಯೆಗೆ ಸಿಲುಕಿದರು.

ಬೆಳಿಗ್ಗೆ ೧೦. ೩೦ ರ ತನಕ ಕಾಸರಗೋಡು –  ಕಣ್ಣೂರು   ಟೌನ್ ಟು ಟೌನ್ , ಕಾಸರಗೋಡು – ಮಂಗಳೂರು, ಕಾಸರಗೋಡು – ಸುಳ್ಯ , ಕಾಸರಗೋಡು – ಕಾಞ೦ಗಾಡ್ ರೂಟ್ ನಲ್ಲಿ  ತಲಾ ನಾಲ್ಕು ಬಸ್ಸುಗಳು ಸಂಚಾರ ನಡೆಸಿದವು. ಬಳಿಕ ಈ ಬಸ್ಸುಗಳು ಸಂಚಾರ ಸ್ಥಗಿತಗೊಳಿಸಿದವು.

ಬಿ ಎಂ ಎಸ್ , ಎ ಐ ಟಿ ಯು ಸಿ ಸಂಘಟನೆಗಳು  ಮುಷ್ಕರಕ್ಕೆ ಕರೆನೀಡಿದ್ದವು. ಸಿ ಐ ಟಿ ಯು ಮುಷ್ಕರಕ್ಕೆ ಬೆಂಬಲ ನೀಡುವುದಿಲ್ಲ ಎಂದು  ಘೋಷಿಸಿದ್ದರೂ ಕೊನೆ ಕ್ಷಣದಲ್ಲಿ ಮುಷ್ಕರದಲ್ಲಿ ಪಾಲ್ಗೊಂಡಿದ್ದು , ಇದರಿಂದ ಸಂಚಾರ ಸಂಪೂರ್ಣ ಸ್ಥಗಿತ ಗೊಂಡಿತ್ತು.

Sneha Gowda

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

6 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

6 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

6 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

6 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

7 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

7 hours ago