ಸಾರ್ವಜನಿಕ ಸಂಸ್ಥೆಗಳನ್ನು ಸಂರಕ್ಷಿಸುವುದು ರಾಜ್ಯ ಸರಕಾರದ ಗುರಿ; ಪಿಣರಾಯಿ ವಿಜಯನ್

ಕಾಸರಗೋಡು : ಸಾರ್ವಜನಿಕ ವಲಯ ಸಂಸ್ಥೆಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಯತ್ತ ಮುನ್ನೆಡೆಸಲು ಕೇರಳ ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು

ಅವರು ಶುಕ್ರವಾ ಕೆಲ್ – ಇ ಎಂ ಎಲ್ ನ ನವೀಕೃತ ಘಟಕವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸಾರ್ವಜನಿಕ ಸಂಸ್ಥೆಗಳನ್ನು ಸಂರಕ್ಷಿಸುವುದು ಹಾಗೂ ಉಳಿಸುವುದು ರಾಜ್ಯ ಸರಕಾರದ ಗುರಿಯಾಗಿದೆ . ಈ ದ್ರಷ್ಟಿಯಿಂದ ಅವನತಿಯಲ್ಲಿದ್ದ ಈ ಸಂಸ್ಥೆಯನ್ನು ರಾಜ್ಯ ಸರಕಾರ ಕೈಗೆತ್ತಿಕೊಂಡು ಪುನಶ್ಚೇತನ ಗೊಳಿಸಿದೆ. ಈ ಬಾರಿಯ ಮುಂಗಡ ಪತ್ರದಲ್ಲಿ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಒತ್ತು ನೀಡಿದೆ ಎಂದು ಸಚಿವರು ಹೇಳಿದರು.

ಕೇಂದ್ರ ಸರಕಾರ ಮಾರಾಟ ಮಾಡುವ ಸಾರ್ವಜನಿಕ ವಲಯ ಸಂಸ್ಥೆಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರಕಾರ ಯತ್ನಿಸುತ್ತಿದೆ. ರಾಜ್ಯ ಸರಕಾರದ ಭೂಮಿಯಲ್ಲಿ ಆರಂಭಿಸಿರುವ ಸಾರ್ವಜನಿಕ ವಲಯ ಸಂಸ್ಥೆಗಳನ್ನು ಖಾಸಗೀಕರಣ ಸರಿಯಲ್ಲ . ರಾಜ್ಯ ಸರಕಾರಕ್ಕೆ ಬಿಟ್ಟುಕೊಟ್ಟಲ್ಲಿ ಸಂರಕ್ಷಿಸಲಾಗುವುದು . ಎಂದು ಮುಖ್ಯಮಂತ್ರಿ ಹೇಳಿದರು

ರಾಜ್ಯ ಕೈಗಾರಿಕಾ ಸಚಿವ ಪಿ . ರಾಜೀವ್ ಅಧ್ಯಕ್ಷತೆ ವಹಿಸಿದ್ದರು. ಸಂಸದ ರಾಜ್ ಮೋಹನ್ ಉಣ್ಣಿ ತ್ತಾನ್ , ಶಾಸಕರಾದ ಎನ್ . ಎ , ನೆಲ್ಲಿಕುನ್ನು, ಎ .ಕೆ. ಎಂ ಅಶ್ರಫ್ , ಸಿ. ಎಚ್ ಕುಞ೦ಬು, ಎಂ . ರಾಜಗೋಪಾಲ್ , ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ , ಮಾಜಿ ಸಂಸದ ಪಿ . ಕರುಣಾಕರನ್, ಕೈಗಾರಿಕಾ ಇಲಾಖಾ ಜಾರ್ಯದರ್ಶಿ ಎ .ಪಿ . ಎಂ ಮುಹಮ್ಮದ್ ಅನೀಶ್ , ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ , ಕಾಸರಗೋಡು ಬ್ಲಾಕ್ ಪಂಚಾಯತ್ ಅಧ್ಯಕ್ಷ ಸಿ.ಎ.ಸೈಮಾ, ಉಪಾಧ್ಯಕ್ಷ ಪಿ.ಎ.ಅಶ್ರಫ್ ಅಲಿ, ಮೊಗ್ರಾಲ್ ಪುತ್ತೂರು ಪಂಚಾಯತ್ ಅಧ್ಯಕ್ಷ ಸಮೀರ ಫೈಸಲ್, ಜಿಲ್ಲಾ ಪಂಚಾಯತ್ ಸದಸ್ಯೆ ಜಮೀಲಾ ಸಿದ್ದಿಕ್, ವಾರ್ಡ್ ಸದಸ್ಯ ಎಂ.ಗಿರೀಶ್, ಟ್ರೇಡ್ ಯೂನಿಯನ್ ಮುಖಂಡರಾದ ಎ.ಅಬ್ದುರಹ್ಮಾನ್, ಪಿ.ಕೆ.ಫೈಸಲ್. ಮುರಳೀಧರನ್, ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಶಾಜಿ ಎಂ ವರ್ಗೀಸ್, ಕೆಇಎಲ್ ಇಎಂಎಲ್ ಮುಖ್ಯಸ್ಥ ಜೋಷಿ ಕುರಿಯಾಕೋಸ್ ಮತ್ತು ಕೆಇಎಲ್ ಇಎಂಎಲ್ ಮುಖ್ಯಸ್ಥ ಪಿ.ರಾಮಚಂದ್ರನ್ ಹಾಗೂ ಇತರ ಜನಪ್ರತಿನಿಧಿಗಳು , ಅಧಿಕಾರಿಗಳು ಉಪಸ್ಥಿತರಿದ್ದರು.

Gayathri SG

Recent Posts

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

32 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

34 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

58 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

1 hour ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 hour ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

1 hour ago