News Karnataka Kannada
Tuesday, May 07 2024
ಕಾಸರಗೋಡು

ಕಾಸರಗೋಡು: ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಆರೋಪಿಯ ಬಂಧನ

Accused arrested in sexual harassment case
Photo Credit : By Author

ಕಾಸರಗೋಡು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಜಾಮೀನು ಪಡೆದು ಕಳೆದ ಆರು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ನೀಲೇಶ್ವರ ಪೊಲೀಸರು ಅಸ್ಸಾಂ ನಿಂದ ಬಂಧಿಸಿದ್ದಾರೆ.

ಅಸ್ಸಾಂ ಮಿಲನ್ ಪುರದ ಶೇಖರ ಚೌಧರಿ (42) ಬಂಧಿತ ಆರೋಪಿ. 2016 ರಲ್ಲಿ ಚಾಯೋತ್ ನ ಫ್ಲೈ ವುಡ್ ಕಂಪೆನಿಯಲ್ಲಿ ಕೆಲಸ ನಿರ್ವ ಹಿಸುತ್ತಿದ್ದ ಈತ ಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಪೊಲೀಸರು ಈತನನ್ನು ಬಂಧಿಸಿದ್ದರು.

ಕಣ್ಣೂರು ಸೆಂಟ್ರಲ್ ಜೈಲ್ ನಲ್ಲಿ ನ್ಯಾಯಾಂಗ ಬಂಧನ ದಲ್ಲಿದ್ದ ಈತ ಜಾಮೀನು ಪಡೆದು ಬಳಿಕ ತಲೆಮರೆಸಿ ಕೊಂಡಿದ್ದನು. ನ್ಯಾಯಾಲಯ ಈತನಿಗಾಗಿ ವಾರಂಟ್ ಹೊರಡಿಸಿತ್ತು. ಆರೋಪಿಗಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಸ್ಸಾಂನಿಂದ ಈತನನ್ನು ಬಂಧಿಸಿ ಕಾಸರಗೋಡಿಗೆ ಕರೆದುಕೊಂಡು ಬಂದಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು