ಅನಂತ ಪದ್ಮನಾಭಸ್ವಾಮಿ ಕ್ಷೇತ್ರದ ಕೆರೆಯಲ್ಲಿ ಮತ್ತೊಂದು ಮೊಸಳೆ ಪತ್ತೆ

ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯ ಅನಂತಪುರದ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಸಸ್ಯಹಾರಿ ಬಬಿಯಾ ಮೊಸಳೆ ಸಾವನ್ನಪ್ಪಿದ ಒಂದು ವರ್ಷ ಒಂದು ತಿಂಗಳ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿದೆ. ಇದು ಭಕ್ತರಲ್ಲಿ ಅಚ್ಚರಿಗೆ ಕಾರಣವಾಗಿದೆ.

ಕುಂಬಳೆ ಸಮೀಪದ ಅನಂತಪುರ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಬ್ರಿಟೀಷರ ಗುಂಡೇಟಿಗೆ ಬಲಿಯಾಗಿದ್ದ ಮೊಸಳೆ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿತ್ತು. ದೇವಸ್ಥಾನದ ಕಲ್ಯಾಣಿಯಲ್ಲಿ ದೇವಮೊಸಳೆ ಅಂತಾನೆ ಇತಿಹಾಸ ಹೊಂದಿದ್ದ ಈ ಬಬಿಯಾ ಎನ್ನುವ ಮೊಸಳೆ 75 ವರ್ಷಗಳ ಕಾಲ ಪೂಜಿಸಲ್ಪಟ್ಟಿತ್ತು. ಆದರೆ, 2022 ರ ಅಕ್ಟೋಬರ್ 9 ರಂದು ಇದು ಮೃತಪಟ್ಟಿತ್ತು.

ಬಬಿಯಾ ಮೃತಪಟ್ಟು ಒಂದು ವರ್ಷ ಒಂದು ತಿಂಗಳ ಬಳಿಕ ಸದೃಢ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಇದು ಭಕ್ತರಲ್ಲಿ ಭಾರೀ ಅಚ್ಚರಿಗೆ ಕಾರಣವಾಗಿದೆ.

ಹಲವಾರು ದೇವಸ್ಥಾನಗಳಲ್ಲಿ ಆನೆ, ಬಸವ, ಇತ್ಯಾದಿ ಪ್ರಾಣಿಗಳು ದೇವರ ಪ್ರಾಣಿಗಳಾಗಿರುತ್ತವೆ. ಆದರೆ ಅನಂತಪದ್ಮನಾಭ ದೇವಸ್ಥಾನದಲ್ಲಿ ಮೊಸಳೆ ದೇವರ ಮೊಸಳೆಯಾಗಿದೆ. ಕ್ಷೇತ್ರದ ಕೆರೆಯಲ್ಲಿ ನೀರಿನ ಮಧ್ಯೆಯೇ ಇದ್ದುಕೊಂಡಿದ್ದ ಬಬಿಯಾ ಮೊಸಳೆಗೆ ಪ್ರತಿನಿತ್ಯ ಪೂಜೆಯ ಬಳಿಕ ನೈವೇದ್ಯ ಅರ್ಪಿಸಲಾಗುತ್ತಿತ್ತು. ಈ ನೈವೇದ್ಯವೇ ಮೊಸಳೆಯ ಆಹಾರವಾಗಿತ್ತು. ಈ ಮೊಸಳೆಯು ಯಾರಿಗೂ ತೊಂದರೆ, ನೋವು ಉಂಟು ಮಾಡಿಲ್ಲ.

ಈ ಮೊಸಳೆಯು ಹೆಚ್ಚಿನ ಸಮಯವನ್ನು ದೇವಸ್ಥಾನದ ಎಡ ಭಾಗದಲ್ಲಿರುವ ಗುಹೆಯಲ್ಲಿ ನೆಲೆಸುತ್ತಿತ್ತು. ಮಧ್ಯಾಹ್ನದ ಪೂಜೆಯ ನಂತರ ನೈವೇದ್ಯ ಇಟ್ಟು ಮೊಸಳೆಯನ್ನು ಕರೆಯಲಾಗುತ್ತಿತ್ತು. ಹೀಗೆ 75 ವರ್ಷಗಳ ಕಾಲ ಪೂಜಿಸಲ್ಪಟ್ಟಿದ್ದ ಬಬಿಯಾ ಮೊಸಳೆ ಕಳೆದ ವರ್ಷ ಮೃತಪಟ್ಟಿತ್ತು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago