ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಎಸ್ಐ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಕಾಸರಗೋಡು: ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿಆಸ್ಪತ್ರೆ ಗೆ ದಾಖಲಿಸಲಾಗಿದ್ದ ಎ ಎಸ್ಐ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಬೇಡಡ್ಕ ಠಾಣಾ ಎಎಸ್ಐ ರಾಜಾಪುರ ಕೋಲಚ್ಚಿಲ್ ನ ವಿಜಯನ್ (50) ಮೃತಪಟ್ಟವರು. ಎರ್ನಾಕುಲಂ ನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯನ್ ಶನಿವಾರ ಸಂಜೆ ಮೃತ ಪಟ್ಟರು.

ಏಪ್ರಿಲ್ 29 ರಂದು ಮಧ್ಯಾಹ್ನ ಬೇಡಡ್ಕ ಪೊಲೀಸ್ ಠಾಣೆ ಯ ಸಮೀಪದ ವಸತಿ ಗ್ರಹದಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವಿಜಯನ್ ರವರನ್ನು ಕಾಸರಗೋಡು ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸ್ಥಿತಿ ಗಂಭೀರ ವಾದುದರಿಂದ ಬುಧವಾರ ಎರ್ನಾಕುಲಂ ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ರಾಜಕೀಯ ಒತ್ತಡವು ಆತ್ಮಹತ್ಯೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.

ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಯುವ ಕಾಂಗ್ರೆಸ್ ಕಾರ್ಯಕರ್ತರೋರ್ವರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಲು ವಿಜಯನ್ ರವರ ಮೇಲೆ ಕೆಲ ಅಧಿಕಾರಿಗಳು ಹಾಗೂ ಆಡಳಿತ ಪಕ್ಷದ ಕೆಲ ಮುಖಂಡರು ಒತ್ತಡ ಹೇರಿದ್ದರು. ಇದರಿಂದ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಕೇಳಿಬರುತ್ತಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

Ashika S

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

4 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

15 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

22 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

24 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

36 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

45 mins ago