ರೈಲು ಹಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರ ಮೃತದೇಹ ಪತ್ತೆ

ಕಾಸರಗೋಡು: ರೈಲು ಹಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹೊಸದುರ್ಗ ಸಮೀಪ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಸಂತು ಮಾಲಿಕ್ (32) ಮತ್ತು ಫಾರೂಕ್ ಶೇಖ್(23) ಮೃತ ಪಟ್ಟವರು. ಕಟ್ಟಡ ನಿರ್ಮಾಣ ಕಾಮಗಾರಿ ಕೆಲಸ ಮಾಡುತ್ತಿದ್ದ ಇವರು ಹೊಸದುರ್ಗ ಕೊಳ ವಯಲಿನ ಕ್ವಾ ಟರ್ಸ್ ನಲ್ಲಿ ವಾಸವಾಗಿದ್ದರು. ಮೃತ ದೇಹಗಳ ಬಳಿ ಎ ಟಿ ಎಂ ಕಾರ್ಡ್ ಹಾಗೂ ಮೊಬೈಲ್ ಫೋನ್ ಹುಡಿ ಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹೊಸದುರ್ಗ ಗೇಟ್ ಸಮೀಪ ದ ಹಳಿಯಲ್ಲಿ ಶನಿವಾರ ಬೆಳಿಗ್ಗೆ ಮೃತ ದೇಹಗಳು ಪತ್ತೆಯಾಗಿವೆ.ರೈಲು ಹಳಿ ಮೂಲಕ ನಡೆದು ಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ರೈಲು ಬಡಿದು ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಹೊಸದುರ್ಗ ಠಾಣಾ ಪೊಲೀಸರು ಮಹಜರು ನಡೆಸಿದರು. ಮೃತ ದೇಹಗಳನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

Gayathri SG

Recent Posts

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

17 seconds ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

21 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

35 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

51 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

54 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

1 hour ago