ಕಾಸರಗೋಡು: ವಿವಾಹವಾಗುವ ಭರವಸೆ ನೀಡಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದ ಆರೋಪಿಯನ್ನು ಕುಂಬಳೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬದಿಯಡ್ಕ ಪಳ್ಳತ್ತಡ್ಕದ ಪ್ರದೀಪ್ ಕೆ.( ೨೧) ಬಂಧಿತ ಆರೋಪಿ. ಈತ ಕುಂಬಳೆ ಠಾಣಾ ವ್ಯಾಪ್ತಿಯ ಹದಿನಾರರ ಹರೆಯದ ಬಾಲಕಿಯ ವಿವಾಹ ವಾಗುವುದಾಗಿ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ನಡೆಸಿದ್ದು , ಬಾಲಕಿ ಗರ್ಭಿಣಿಯಾಗಿದ್ದಳು. ಈ ಬಗ್ಗೆ ಕುಂಬಳೆ ಪೊಲೀಸರಿಗೆ ಲಭಿಸಿದ ದೂರಿನಂತೆ ಆರೋಪಿಯನ್ನು ಬಂಧಿಸಲಾಗಿದೆ.