ಕಾಸರಗೋಡು: ಜಿಲ್ಲೆಯ ವಿವಿದೆಡೆ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವೆಳ್ಳರಿಕುಂಡು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಆಗಸ್ಟ್ 5ರ ಶುಕ್ರವಾರದಂದು ರಜೆ ಘೋಷಣೆ ಮಾಡಲಾಗಿದೆ.
ಭಾರೀ ಮಳೆ ಮುಂದುವರಿಯುತ್ತಿರುವುದರಿಂದ ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಪದವಿಪೂರ್ವ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ಸೇರಿದಂತೆ ಎಲ್ಲಾ ಶಾಲೆಗಳಿಗೆ ನಾಳೆ(ಆ. 5) ರಜೆ ಘೋಷಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.
ಈ ಭಾಗದಲ್ಲಿಹಲವು ಪ್ರದೇಶಗಳಲ್ಲಿ ಮನೆಗೆ ನೀರು ನುಗ್ಗಿದ್ದು, ಮತ್ತೊಂದೆಡೆ ನೆರೆ ನೀರಿನಿಂದಾಗಿ ಮಹಿಳೆಯೊಬ್ಬರು ಕೊಚ್ಚಿ ಹೋಗಿರುವ ಘಟನೆ ನಡೆದಿದೆ.