News Karnataka Kannada
Friday, May 03 2024
ಕಾಸರಗೋಡು

ಕಾಸರಗೋಡು: ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳು ವಶ

Kasargod: Banned plastic products seized
Photo Credit : By Author

ಕಾಸರಗೋಡು: ಮಂಜೇಶ್ವರ ಗ್ರಾಮ ಪಂಚಾಯತ್ ಅಧಿಕಾರಿಗಳು ನಡೆಸಿದ ದಾಳಿಯಿಂದ ನಿಷೇಧಿತ ಭಾರೀ ಪ್ರಮಾಣದ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ.

ಪಂಚಾಯತ್ ವ್ಯಾಪ್ತಿಯ ಅಂಗಡಿ – ಮಳಿಗೆಗಳಿಗೆ ದಾಳಿ ನಡೆಸಿದ್ದು , ಪ್ಲಾಸ್ಟಿಕ್ ಚೀಲ ಹಾಗೂ ಇತರ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪಂಚಾಯತ್ ಕಾರ್ಯದರ್ಶಿ ಸಜಿ ಥಾಮಸ್, ಸೆಬಾಸ್ಟಿಯನ್ ಥಾಮಸ್, ಜಿಬಿನ್ ಲಾಲ್ ಮತ್ತು ಚರಣ್ ಕುಮಾರ್ ನೇತೃತ್ವದಲ್ಲಿ ತಪಾಸಣೆ ನಡೆಸಲಾಯಿತು. ಪ್ಲಾಸ್ಟಿಕ್ ಬದಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ವ್ಯಾಪಾರಿಗಳಿಗೆ ಸಲಹೆ ನೀಡಿದರು.

ತಪಾಸಣೆ ಕಟ್ಟುನಿಟ್ಟಾಗಿ ಮುಂದುವರಿಯಲಿದ್ದು, ಒಂದು ಬಾರಿ ಬಳಸುವ ಪ್ಲಾಸ್ಟಿಕ್ ಕಂಡುಬಂದಲ್ಲಿ ಪರವಾನಗಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪಂಚಾಯತ್ ಕಾರ್ಯದರ್ಶಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು