ಕಾಸರಗೋಡು: ದಂತ ವೈದ್ಯರ ಸಾವಿನ ಪ್ರಕರಣ, ಐವರ ಬಂಧನ

ಕಾಸರಗೋಡು: ಬದಿಯಡ್ಕದ ದಂತ ವೈದ್ಯ ಡಾ.ಎಸ್.ಕೃಷ್ಣಮೂರ್ತಿ ರವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಐವರನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.ಇವರು ವೈದ್ಯರಿಗೆ ಬೆದರಿಕೆಯೊಡ್ಡಿದ್ದರು ಎನ್ನಲಾಗಿದೆ.

ಈ ನಡುವೆ ಬದಿಯಡ್ಕ ಪೇಟೆಯಲ್ಲಿ ವಿಶ್ವ ಹಿಂದೂ ಪರಿಷತ್ ಕರೆ ನೀಡಿರುವ ಹರತಾಳ ಪೂರ್ಣವಾಗಿದೆ. ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಚ್ಚಿವೆ.ವಿಶ್ವ ಹಿಂದೂ ಪರಿಷತ್ ನೇತತ್ವದಲ್ಲಿ ಬದಿಯಡ್ಕದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೃಷ್ಣಮೂರ್ತಿ ರವರ ಮೃತ ದೇಹವನ್ನು ಇಂದು ಮುಂಜಾನೆ ಬದಿಯಡ್ಕಕ್ಕೆ ತರಲಾಗಿತ್ತು ಬಳಿಕ ಮನೆಯ ಹಿತ್ತಿಲಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅಲಿತುಪ್ಪಕಲ್,ಮುಹಮ್ಮದ್ ಹನೀಫ್,ಅಶ್ರಫ್, ಮುಹಮ್ಮದ್ ಮತ್ತು ಉಮ್ಮರುಲ್ ಫಾರೂಕ್ ಮೊದಲಾದವರನ್ನು ಬಂಧಿಸಲಾಗಿದೆ.

ಕ್ಲಿನಿಕ್ ಗೆ ತೆರಳಿ ಇವರು ವೈದ್ಯರಿಗೆ ಬೆದರಿಕೆವೊಡ್ಡಿದ್ದರು. ಮಂಗಳವಾರ ಘಟನೆ ನಡೆದಿತ್ತು.ಕ್ಲಿನಿಕ್ ಗೆ ಬಂದಿದ್ದ ಮಹಿಳೆ ಜೊತೆ ವೈದ್ಯ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಂಬ ಆರೋಪ ಘಟನೆಗೆ ಕಾರಣ ವಾಗಿತ್ತು. ಬೆದರಿಕೆ ಬಳಿಕ ಡಾ.ಕೃಷ್ಣಮೂರ್ತಿ ನಾಪತ್ತೆಯಾಗಿದ್ದರು. ಬೈಕ್ ಕುಂಬಳೆ ಪೇಟೆಯಲ್ಲಿ ಪತ್ತೆಯಾಗಿತ್ತು. ಮೊಬೈಲ್ ಕ್ಲಿನಿಕ್ ನಲ್ಲಿ ಬಿಟ್ಟು ಹೋಗಿದ್ದರು. ನಾಪತ್ತೆ ಕುರಿತು ಪತ್ನಿ ನೀಡಿದ ದೂರಿ ನಂತೆ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದರು.ಈ ನಡುವೆ ಕುಂದಾಪುರದ ರೈಲು ಹಳಿಯಲ್ಲಿ ವೈದ್ಯರ ಮೃತ ದೇಹ ಗುರುವಾರ ಪತ್ತೆಯಾಗಿತ್ತು.

ವಿಶ್ವ ಹಿಂದು ಪರಿಷತ್ ಆಶ್ರಯದಲ್ಲಿ ಬದಿಯಡ್ಕ ಪೇಟೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಡಾ.ಕೃಷ್ಣಮೂರ್ತಿ ಅವರ ಮನೆಯ ಪರಿಸರದಿಂದ ಹೊರಟ ಮೆರವಣಿಗೆ , ಬಸ್ಸು ನಿಲ್ದಾಣ ಪರಿಸರದಲ್ಲಿ ಕೊನೆಗೊಂಡಿತು.ವಿಶ್ವ ಹಿಂದು ಪರಿಷತ್ ಪ್ರಖಂಡ ಕಾರ್ಯದರ್ಶಿ ಮಂಜುನಾಥ ಮಾನ್ಯ ಸ್ವಾಗತಿಸಿದರು. ಸಂಘ ಪರಿವಾರ ಮುಖಂಡ ಶರಣ್ ಪಂಪ್ ವೆಲ್, ನ್ಯಾಯವಾದಿ ಕೆ.ಶ್ರೀಕಾಂತ್, ಪಿ.ರಮೇಶ್ ಕಾಸರಗೋಡು,ಸುಧಾಮ ಗೋಸಾಡ, ಹರೀಶ್ ನಾರಂಪಾಡಿ,ಹರೀಶ್ ಪುತ್ರಕಳ ಮಾತನಾಡಿದರು.

Ashika S

Recent Posts

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

4 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

23 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

34 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

1 hour ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

1 hour ago