News Karnataka Kannada
Friday, May 17 2024
ಕಾಸರಗೋಡು

ಕಾಸರಗೋಡು: ಮಾದಕ ವಸ್ತು ಸಹಿತ ದಂಪತಿ ಸೇರಿ, ನಾಲ್ವರ ಬಂಧನ

Kasargod: Four people, including a couple, arrested with drugs
Photo Credit : News Kannada

ಕಾಸರಗೋಡು: ಲಕ್ಷಾಂತರ ರೂ. ಎಂ.ಡಿ.ಎಂ.ಎ ಮಾದಕ ವಸ್ತು ಸಹಿತ ದಂಪತಿ ಸೇರಿದಂತೆ ನಾಲ್ವರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮೇಲ್ಪರಂಬದ ಅಬೂಬಕ್ಕರ್ (35), ಪತ್ನಿ ಅಮೀನಾ ಅಸರ್ (23), ಬೆಂಗಳೂರಿನ ಸೂರಜ್ (32) ಮತ್ತು ಎ.ಕೆ ವಸೀಮ್ (32) ಎಂದು ಗುರುತಿಸಲಾಗಿದೆ. ಇವರಿಂದ 150 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಮಾದಕ ವಸ್ತು ಪತ್ತೆಯಾಗಿದೆ. ಬೆಂಗಳೂರಿನಿಂದ ಮಾದಕ ವಸ್ತುವನ್ನು ಸಾಗಾಟ ಮಾಡಿದ್ದಾಗಿ ಬಂಧಿತರು ವಿಚಾರಣೆ ವೇಳೆ ತಿಳಿಸಿದ್ದಾರೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು