ಕಾಸರಗೋಡು: ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 66 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಸುಮಾರು ೧.೨೪೧ ಕೆ.ಜಿ ಚಿನ್ನವನ್ನುವಶಪಡಿಸಿಕೊಳ್ಳಲಾಗಿದೆ. ಬೇಕಲ್ ನ ಕುನ್ನಿಲ್ ಅಬೂಬಕ್ಕರ್ ನನ್ನು ಬಂಧಿಸಲಾಗಿದ್ದು, ಸದ್ಯ ವಿಚಾರಣೆ ನಡೆಯುತ್ತಿದೆ.
ಮೂಲಗಳ ಪ್ರಕಾರ, ಆರೋಪಿ ಅಬೂಬಕ್ಕರ್ ದುಬೈನಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ಮೂಲಕ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು.