ಕಾಸರಗೋಡು: ವಲಸೆ ಕಾರ್ಮಿಕರಿಗೆ ಅರೋಗ್ಯ ತಪಾಸಣೆ ಶಿಬಿರ

ಕಾಸರಗೋಡು: ಕುಂಬಳೆ ಜನಮೈತ್ರಿ ಪೊಲೀಸ್, ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ವಲಸೆ ಕಾರ್ಮಿಕರಿಗೆ ಅರೋಗ್ಯ ತಪಾಸಣೆ ಶಿಬಿರ ಕುಂಬಳೆಯಲ್ಲಿ ಬುಧವಾರ ನಡೆಯಿತು.

ಹೋಟೆಲ್, ಬೇಕರಿ, ಕೂಲ್ ಡ್ರಿಂಕ್ಸ್ ವಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ವಲಸೆ ಕಾರ್ಮಿಕರಿಗಾಗಿ ಶಿಬಿರ ನಡೆಸಲಾಯಿತು.ಕುಂಬಳೆ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಪಿ.ಪ್ರಮೋದ್ ಉದ್ಘಾಟಿಸಿದರು. ಮಲೇರಿಯಾ,ಟೈಫಾಯ್ಡ್, ಹಳದಿ ಜ್ವರ ಸೇರಿದಂತೆ ಆರು ರೋಗಗಳ ಲ್ಯಾಬ್ ತಪಾಸಣಾ ನಡೆಸಲಾಯಿತು.

ಡಾ.ದೀಪ್ತಿ ವಿಜಯಕುಮಾರ್ ರವರು ತಪಾಸಣೆಗೆ ನೇತೃತ್ವ ನೀಡಿದರು.ರೋಗ ಪತ್ತೆಯಾದವವರಿಗೆ ಆರೋಗ್ಯ ಕಾರ್ಡ್ ನೀಡಲು ತೀರ್ಮಾನಿಸಲಾಯಿತು.ಆರೋಗ್ಯಾಧಿಕಾರಿ ಡಾ.ದಿವಾಕರ ರೈ ಅಧ್ಯಕ್ಷತೆ ವಹಿಸಿದ್ದರು.

ಅರೋಗ್ಯ ಮೇಲ್ವಿಚಾರಕ ಬಿ.ಅಶ್ರಫ್, ಸುರೇಶ್ ಕುಮಾರ್, ಅರೋಗ್ಯ ಅಧಿಕಾರಿ ನಿಶಾ ಮೋಳ್,ಎಂ. ಗೋವಿಂದನ್, ಶ್ರೀಕುಮಾರ್, ಸಿ ಸಿ.ಬಾಲಚಂದ್ರನ್, ಅಖಿಲ್ ಕಾರಾಯಿ, ಎಸ್.ಶಾರದಾ ಮಾತನಾಡಿದರು.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

5 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

6 hours ago