News Karnataka Kannada
Wednesday, May 01 2024
ಕಾಸರಗೋಡು

ಕಾಸರಗೋಡು: ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತ

ncessant rains have thrown normal life out of gear
Photo Credit : By Author

ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ಪ್ರವಾಹ ಸ್ಥಿತಿ ಉಂಟಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ತೀರ ಪ್ರದೇಶದ ಹಲವಾರು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಉಪ್ಪಳ ದಲ್ಲಿ ಇಂದು ಬೆಳಿಗ್ಗೆ ಮನೆಯೊಂದಕ್ಕೆ ನೆರೆ ನೀರು ನುಗ್ಗಿದ್ದು, ಮನೆಯಲ್ಲಿದ್ದವರನ್ನು ಉಪ್ಪಳದಿಂದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು

ಹೊಸದುರ್ಗ ತಾಲೂಕಿನಲ್ಲಿ ಗಾಳಿ ಮಳೆಗೆ ನಾಲ್ಕು ಮನೆಗಳು ಭಾಗಶಃ ಹಾನಿಗೊಂಡಿದೆ. ತಲಪಾಡಿ ಕಾಸರಗೋಡು ನಡುವಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ನೀರು ಹರಿಯಲು ವ್ಯವಸ್ಥೆ ಇಲ್ಲದೆ ರಸ್ತೆ ಯಲ್ಲೇ ನೀರು ತುಂಬಿ ಕೊಂಡಿದ್ದು, ಸಂಚಾರಕ್ಕೂ ಅಡ್ಡಿಯಾಗಿದೆ.

ಕರಂದಕ್ಕಾಡ್, ಮೊಗ್ರಾಲ್ , ಹೊ ಸಂಗಡಿ ಹಾಗೂ ಇನ್ನಿತರ ಕಡೆಗಳಲ್ಲಿ ನೀರು ರಸ್ತೆ ಯಲ್ಲೇ ತುಂಬಿಕೊಂಡಿದೆ. ತಗ್ಗು ಪ್ರದೇಶದ ನೂರಾರು ಮನೆಗಳಿಗೆ ನೀರು ನುಗ್ಗಿದೆ. ಇವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ . ಭಾರೀ ಮಳೆ ಹಿನ್ನಲೆಯಲ್ಲಿ ಇಂದು ಜಿಲ್ಲೆಯ ಶಾಲೆಗಳಿಗೆ ರಜೆ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು