ಕಾಸರಗೋಡು: ಮಳೆಯ ಆರ್ಭಟ, ತಗ್ಗು ಪ್ರದೇಶಗಳು ಜಲಾವೃತ

ಕಾಸರಗೋಡು: ಜಿಲ್ಲೆಯಲ್ಲಿ ಗುರುವಾರವೂ ಮಳೆಯ ಆರ್ಭಟ ಮುಂದುವರಿದಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಕಡಲ್ಕೊರೆತ ತೀವ್ರ ಗೊಂಡಿದ್ದು, ಉಪ್ಪಳ ಮುಸೋಡಿ, ಕುಂಬಳೆ ಕೊಯಿಪ್ಪಾಡಿ ಮೊದಲಾದೆಡೆ ಹಲವು ಮನೆಗಳು ಅಪಾಯದಲ್ಲಿದ್ದು, ಹತ್ತಕ್ಕೂ ಅಧಿಕ ಮನೆಗಳು ಕುಸಿದಿವೆ.

ಪೈವಳಿಕೆ ಸಮೀಪದ ಚಿಪ್ಪಾರ್ ನ ಖಾಸಗಿ ಶಾಲೆಯೊಂದರ ಆವರಣ ಗೋಡೆ ಕುಸಿದು ಬಿದ್ದಿದೆ. ಗುಡ್ಡ ಜರಿದು ಬಿದ್ದಿದೆ. ಯಾವುದೇ ಅಪಾಯ ಉಂಟಾಗಿಲ್ಲ. ಉಪ್ಪಳ ಹೊಳೆಯ ಜೋಡುಕಲ್ಲು ಮಡಂದೂರು – ದೇರಂಬಳ ಸಂಪರ್ಕದ ಕಾಲ್ಸೇತುವೆ ಕುಸಿದು ಬಿದ್ದಿವೆ. ಇದರಿಂದ ಸಂಪರ್ಕ ಕಡಿದಿದೆ.

ಮಧು ವಾಹಿನಿ ಹೊಳೆಯಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಮಧೂರು ದೇವಸ್ಥಾನದ ಆವರಣದೊಳಗೆ ನೀರು ನುಗ್ಗಿದೆ. ಜಿಲ್ಲೆಯ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶದ ಹಲವಾರು ಮನೆಗಳಿಗೆ ನೀರು ನುಗ್ಗಿದೆ. ಹಲವು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ವಿದ್ಯುತ್ ಸಂಪರ್ಕ ಅಸ್ತವ್ಯಸ್ತ ಗೊಂಡಿದೆ. ಹಲವಾರು ಕಂಬಗಳು ಧರಶಾಯಿಯಾಗಿದೆ. ಹಲವೆಡೆ ಗುಡ್ಡಗಳು ಜರಿದು ಬಿದ್ದಿರುವುದರಿಂದ ರಸ್ತೆ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಮಳೆ ಹಿನ್ನಲೆಯಲ್ಲಿ ಜಿಲ್ಲೆಯ ಕಾಲೇಜು ಸೇರಿದಂತೆ ಶಾಲೆಗಳಿಗೆ ಮೂರನೇ ದಿನವಾದ ಇಂದು ಕೂಡಾ ರಜೆ ನೀಡಲಾಗಿದೆ.

Gayathri SG

Recent Posts

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

12 mins ago

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಸಂಬಂಧಿಸಿದಂತೆ ಎಚ್‌ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…

38 mins ago

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ಪ್ರಧಾನಿ ಮೋದಿ ಸಂತಾಪ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಅಪಘಾತದಲ್ಲಿ ಇರಾನ್‌ ಅಧ್ಯಕ್ಷ…

47 mins ago

‘ರೇವ್ ಪಾರ್ಟಿ’ ಮೇಲೆ ಸಿಸಿಬಿ ದಾಳಿ; ನಟಿ ಹೇಮಾ ಸೇರಿ ಐವರು ಅರೆಸ್ಟ್

ಆರ್ ಫಾರ್ಮ್ ಹೌಸ್ ನಲ್ಲಿ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…

1 hour ago

ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಸಕ್ಸಸ್

ಬಂಡೀಪುರದಲ್ಲಿ ಸೆರೆಹಿಡಿಯಲಾಗಿದ್ದ ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಮಾಡಿರುವುದು ಸಕ್ಷಸ್ ಆಗಿದೆ. ಕೂಡು ದಂತದಿಂದ ಆಹಾರ ಸೇವಿಸಲಾಗದೆ ಪರದಾಡುತ್ತಿದ್ದ ಆನೆ…

1 hour ago

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

1 hour ago