News Karnataka Kannada
Friday, May 17 2024
ಕಾಸರಗೋಡು

ಕಾಸರಗೋಡು: ಮಾದಕ ವಸ್ತು ವಿರುದ್ಧ ಕಠಿಣ ಕ್ರಮ ತೆಗೆದು ಕೊಳ್ಳುವಂತೆ ಪೊಲೀಸರಿಗೆ ನಿರ್ದೇಶನ

-muruga-mutt-appoints-administrator
Photo Credit : By Author

ಕಾಸರಗೋಡು: ಅಪರಾಧ ಕೃತ್ಯ ಹಾಗೂ ಮಾದಕ ವಸ್ತು ವಿರುದ್ಧ ಕಠಿಣ ಕ್ರಮ ತೆಗೆದು ಕೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅನಿಲ್ ಕಾಂತ್ ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಡಿ ವೈ ಎಸ್ಪಿ ಹಾಗೂ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದ್ದರು.ಜಿಲ್ಲೆಯ ಕಾನೂನು ಸುವ್ಯವಸ್ಥೆಗಳ ಬಗ್ಗೆ ಅವಲೋಕನ ನಡೆಸಿದರು.

ಮಾದಕ ವಸ್ತು ಹಾಗೂ ಗೂಂಡಾ ಚಟುವಟಿಕೆಗಳ ನಿಗ್ರಹಕ್ಕೆ ಕ್ರಮ ತೆಗೆದು ಕೊಳ್ಳುವಂತೆ ಅದೇಶಿದರು. ಶಬರಿಮಲೆ ಉತ್ಸವ ಅವಧಿಯಲ್ಲಿ ತೆಗೆದುಕೊಳ್ಳ ಬೇಕಾದ ಕ್ರಮಗಳ ಕುರಿತು ಹಾಗೂ ಮಹಿಳೆಯರು,ಮಕ್ಕಳು,ಹಿರಿಯರು ಸೇರಿದಂತೆ ಜನ ಸಾಮಾನ್ಯರ ಜೊತೆ ಉತ್ತಮ ರೀತಿಯಲ್ಲಿ ಸ್ಪಂದಿಸುವಂತೆ ಸಲಹೆ ನೀಡಿದರು. ಕೋಜಿಕ್ಕೋಡ್ ಸಿಟಿ ಪೊಲೀಸ್ ಆಯುಕ್ತ ಎ.ಅಕ್ಬರ್, ಕಣ್ಣೂರು ವಲಯ ಡೆಪ್ಯುಟಿ ಇನ್ಸ್ಪೆಕ್ಟರ್ ರಾಹುಲ್ ಆರ್. ನಾಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವೈಭವ್ ಸಕ್ಸೇನಾ, ಪಿ. ಕೆ ರಾಜು ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು