ಕಾಸರಗೋಡು

ಕಾಸರಗೋಡು: ಸೆ. ೨೨ ರಿಂದ ಎಡನೀರಿನಲ್ಲಿ ಸಾಹಿತ್ಯ ಅಕಾಡೆಮಿಯ ರಾಷ್ಟ್ರೀಯ ಕಾವ್ಯಕಮ್ಮಟ

ಕಾಸರಗೋಡು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಸಹಯೋಗದಲ್ಲಿ ಇದೇ ಮೊದಲ ಬಾರಿಗೆ ದಿನಾಂಕ 22 ರಿಂದ ೨೪ ರ ತನಕ ಮೂರು ದಿನಗಳ ಕಾಲ ರಾಷ್ಟ್ರಮಟ್ಟದ ಕಾವ್ಯಕಮ್ಮಟವನ್ನು ಎಡನೀರು ಮಠದಲ್ಲಿ ಹಮ್ಮಿ ಕೊಂಡಿ ದೆ. ರಾಷ್ಟ್ರ ಮಟ್ಟದಿಂದ ಸುಮಾರು ೬೦ ಮಂದಿ ಶಿಬಿರಾರ್ಥಿಗಳು ಈ ಕಮ್ಮಟದಲ್ಲಿ ಪಾಲ್ಗೊಳ್ಳುವರು

ಸೆ. ೨೨ ರಂದು ಬೆಳಿಗ್ಗೆ ೯ . ೩೦ ಕ್ಕೆ ಗೆ ಎಡನೀರು ಮಠದ ಸ್ವಾಮೀಜಿ ಶ್ರೀ ಸಚ್ಚಿದಾನಂದ ಭಾರತಿ ಅವರ ಸಾನ್ನಿಧ್ಯದಲ್ಲಿ ಹಿರಿಯ ಕವಯಿತ್ರಿ ವಿಜಯಪುರದ ಸರಸ್ವತಿ ಚಿಮ್ಮಲಗಿ ಅವರು ಕಮ್ಮಟವನ್ನು ಉದ್ಘಾಟಿಸಲಿದ್ದು ಹಿರಿಯ ಕವಿ ಡಾ. ರಮಾನಂದ ಬನಾರಿ,  ವಿದ್ವಾಂಸ ಲಕ್ಷ್ಮೀಶ ತೋಳ್ಳಾಡಿ ಮುಖ್ಯ ಅತಿಥಿಗಳಾಗಿರುವರು ಲೇಖಕ – ಅನುವಾದಕ ಪ್ರೊ. ಪಿ. ಎನ್. ಮೂಡಿತ್ತಾಯ, ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್., ಅಕಾಡೆಮಿಯ ಸದಸ್ಯ ಸಂಚಾಲಕರಾದ ದೀಪ್ತಿ ಭದ್ರಾವತಿ ಮತ್ತು ಕೇಶವ ಬಂಗೇರರು ಭಾಗವಹಿಸುವರು.

ಅಕಾಡೆಮಿಯ ಅಧ್ಯಕ್ಷ ಡಾ.ಬಿ.ವಿ. ವಸಂತಕುಮಾರ್ ಅಧ್ಯಕ್ಷತೆ ವಹಿಸುವರು. ಮೂರು ದಿನಗಳ ಕಾಲ ನಡೆಯುವ ಕಮ್ಮಟದಲ್ಲಿ ಡಾ. ಯು. ಮಹೇಶ್ವರಿ, ಡಾ. ವಸಂತಕುಮಾರ ಪೆರ್ಲ, ಬಿ. ಆರ್ ಸೂರಜ್, ಸರಸ್ವತಿ ಚಿಮ್ಮಲಗಿ, ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಡಾ. ಧನಂಜಯ ಕುಂಬಳ, ನಾಗರಾಜ ತಲಕಾಡು, ಸುಬ್ಬು ಹೊಲೆಯಾರ್, ಡಾ. ಎಚ್‌. ಎಂ.ಚನ್ನಪ್ಪಗೋಳ ಮೊದಲಾದವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು.

ಮೂರು ದಿನಗಳ ಕಾಲವೂ ಗಂಪು ಚರ್ಚೆ, ಕಾವ್ಯರಚನೆ, ಕವಿಗೋಷ್ಠಿ ಮೊದಲಾದ ಕಾರ್ಯಕ್ರಮ ನಡೆಯಲಿದೆ. ಶನಿವಾರ ಅಪರಾಹ್ನ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳ ಸಾನ್ನಿಧ್ಯ ದಲ್ಲಿ , ಕವಿ ಬಿ. ಆರ್. ಲಕ್ಷ್ಮಣರಾವ್‌ ಸಮಾರೋಪ ಭಾಷಣ ಮಾಡುವರು.

ಸುಬ್ಬು ಹೊಲೆಯಾರ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿರುವರು , ಡಾ. ವಸಂತಕುಮಾರ ಪೆರ್ಲ ಕಮ್ಮಟದ ಫಲಶೃತಿ ಬಗ್ಗೆ ಮಾತಾಡುವರು, ಜಿಲ್ಲಾ ಲೇಖಕರ ಸಂಘದ ಕಾರ್ಯದರ್ಶಿ ಪ್ರೊ. ಪಿ.ಎಸ್. ಮೂಡಿತ್ತಾಯ, ಅಕಾಡೆಮಿಯ ಸದಸ್ಯ ಸಂಚಾಲಕರಾದ ದೀಪ್ತಿ ಭದ್ರಾವತಿ ಮತ್ತು ಕೇಶವ ಬಂಗೇರ ಉಪಸ್ಥಿತರಿರುವರು ಅಕಾಡೆಮಿಯ ಅಧ್ಯಕ್ಷ ಡಾ. ಬಿ. ವಿ. ವಸಂತಕುಮಾರ್ ಅಧ್ಯಕ್ಷತೆ ವಹಿಸುವರು.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago