ಕಾಸರಗೋಡು : ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಎರಡು ಕಿಲೋ ಗಾಂಜಾ ಹಾಗೂ 25 ಗ್ರಾಂ ಎಂ ಡಿ ಎಂ ಎ ಮಾದಕ ವಸ್ತು ಸಹಿತ ಇಬ್ಬರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಸಕ್ಸೇನಾ ನೇತೃತ್ವದ ವಿಶೇಷ ತಂಡ ಬಂಧಿಸಿದೆ. ಸಾಗಾಟಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಬಂಧಿತರನ್ನು ಕಣ್ಣೂರು ಮಾಡಾಯಿಯ ನಿಜಾಮ್ (32) ಮತ್ತು ಮುಹಮ್ಮದ್ ತಾಹಾ ,(20) ಎಂದು ಗುರುತಿಸಲಾಗಿದೆ. ನೀಲೇಶ್ವರ ಪಳ್ಳಿ ಕೆರೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಅಕ್ರಮ ಸಾಗಾಟ ಪತ್ತೆಯಾಗಿದೆ. ಕಾರಲಿದ್ದವರ ಚಲನವಲನ ಗಮನಿಸಿದ ಪೊಲೀಸರು ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟ ಪತ್ತೆಯಾಗಿದೆ.