News Karnataka Kannada
Sunday, May 12 2024
ಕಾಸರಗೋಡು

ಕಾಸರಗೋಡು: ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಬಂಧನ

Kasargod: Two arrested for transporting ganja in car
Photo Credit : By Author

ಕಾಸರಗೋಡು: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಭಾರೀ ಮೌಲ್ಯದ ಗಾಂಜಾವನ್ನು ಬದಿಯಡ್ಕ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದು , ಇಬ್ಬರನ್ನು ಬಂಧಿಸಲಾಗಿದೆ.

ಪೈವಳಿಕೆ ಚಿಪ್ಪಾರಿನ ಮುಹಮ್ಮದ್ ಫಾಯಿಜ್ ( 26) ಮತ್ತು ಉಪ್ಪಳ ಪತ್ವಾಡಿಯ ಅಬೂಬಕ್ಕರ್ ಸಿದ್ದಿಕ್ ( 28) ಬಂಧಿತರು. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದ್ದು, ಪೆರ್ಲ ಇಡಿಯಡ್ಕ ದಲ್ಲಿ ಬದಿಯಡ್ಕ ಕಡೆಗೆ ಬರುತ್ತಿದ್ದ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಕಾರಿನಿಂದ 13. 950 ಕಿಲೋ ಗಾಂಜಾ ವನ್ನು ವಶಪಡಿಸಿಕೊಳ್ಳಲಾಗಿದೆ.

ಗೋಣಿ ಚೀಲದಲ್ಲಿ ತುಂಬಿಸಿ ಸಾಗಿಸಲಾಗುತ್ತಿತ್ತು . ಇದಲ್ಲದೆ ವಾಹನದಿಂದ 57, 350 ರೂ . ನಗದನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು