ಕಾಸರಗೋಡು

ಕಾಸರಗೋಡು: ವಿದ್ಯಾನಗರ ತ್ವರಿತ ವಿಶೇಷ ನ್ಯಾಯಾಲಯ ಉದ್ಘಾಟನೆ

ಕಾಸರಗೋಡು: ಪೋಕ್ಸೊ ನ್ಯಾಯಾಲಯಗಳು ಮಕ್ಕಳ ಬಗ್ಗೆ ಸಂಪೂರ್ಣ ಸಹಾನುಭೂತಿ ಹೊಂದಿರಬೇಕು ಎಂದು ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ವಿದ್ಯಾನಗರದಲ್ಲಿ ವಿಶೇಷ ತ್ವರಿತ ನ್ಯಾಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೌರ್ಜನ್ಯಕ್ಕೊಳಗಾದ ಮಕ್ಕಳಿಗೆ ನ್ಯಾಯವನ್ನು ಸಹಾನುಭೂತಿ ಮತ್ತು ಸ್ವಾಗತಾರ್ಹ ವ್ಯವಸ್ಥೆಯ ಮೂಲಕ ಮಾತ್ರ ಸಾಧಿಸಬಹುದು. ನ್ಯಾಯಾಲಯವು ಉದ್ಘಾಟನೆಗೊಂಡಾಗ, ನ್ಯಾಯವನ್ನು ಪಡೆಯುವ ಮೂಲಭೂತ ಹಕ್ಕು ಮತ್ತಷ್ಟು ಬಲಗೊಳ್ಳುತ್ತದೆ. ಇತರ ನ್ಯಾಯಾಲಯಗಳಿಗಿಂತ ಭಿನ್ನವಾಗಿಪೋಕ್ಸೋ ನ್ಯಾಯಾಲಯಗಳು ಮೊಕದ್ದಮೆಗಳನ್ನು ಶೀಘ್ರವಾಗಿ ತೀರ್ಮಾನಿಸಲಾಗುತ್ತದೆ. ಮಕ್ಕಳು ತಮ್ಮ ಪೋಷಕರಿಂದ ಪಡೆಯುವ ಅದೇ ಕಾಳಜಿಯನ್ನು ಪೋಕ್ಸೊ ನ್ಯಾಯಾಲಯಗಳಿಂದ ಪಡೆಯಬೇಕು. ಮಕ್ಕಳ ಮೇಲಿನ ಯಾವುದೇ ದೌರ್ಜನ್ಯ ದೇಶದ ವಿರುದ್ಧದ ಹಿಂಸೆ. ಮಕ್ಕಳು ಹಿಂಸೆಗೆ ಬಲಿಯಾದಾಗ ಪ್ರಜಾಪ್ರಭುತ್ವದ ಬುನಾದಿ ಅಲುಗಾಡುತ್ತದೆ ಎಂದು ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಹೇಳಿದರು.

ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಧೀಶ ಸಿ.ಕೃಷ್ಣಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಸಿ.ಎಚ್. ಕುಞ೦ಬು, ಎ.ಕೆ.ಎಂ.ಅಶ್ರಫ್, ವಕೀಲರ ಸಂಘದ ಅಧ್ಯಕ್ಷ ನ್ಯಾಯವಾದಿ ಎನ್.ರಾಜಮೋಹನ್, ಮಧೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಗೋಪಾಲಕೃಷ್ಣ, ಜಿಲ್ಲಾ ಸರಕಾರಿ ಪ್ಲೀಡರ್ ಅಡ್ವ.ಕೆ.ದಿನೇಶ್ ಕುಮಾರ್, ಕಾಸರಗೋಡು ವಕೀಲ ಗುಮಾಸ್ತರ ಸಂಘದ ಅಧ್ಯಕ್ಷ ನಾರಾಯಣ ಮಣಿ ಮಾತನಾಡಿದರು. ಕಾಸರಗೋಡು ವಕೀಲರ ಸಂಘದ ಅಧ್ಯಕ್ಷ ನ್ಯಾಯವಾದಿ .ಎಂ.ನಾರಾಯಣ ಭಟ್ ಸ್ವಾಗತಿಸಿ, ಕಾಸರಗೋಡು ಮುಖ್ಯ ನ್ಯಾಯಿಕ ದಂಡಾಧಿಕಾರಿ ಕೆ.ಜಿ.ಉಣ್ಣಿಕೃಷ್ಣನ್ ವಂದಿಸಿದರು.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

1 hour ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

1 hour ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago