ಕಾಸರಗೋಡು: ಗಡಿನಾಡ ಕನ್ನಡಿಗರ ಸಮಸ್ಯೆ ಪರಿಹಾರಕ್ಕಾಗಿ ಕೇರಳ ಸಿಎಂ ಭೇಟಿ

ಕಾಸರಗೋಡು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ  ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್‌ ಅವರು ಕಾಸರಗೋಡು ಕನ್ನಡಿಗರ ಸಮಸ್ಯೆಗಳ ಕಡೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಗಮನಸೆಳೆದರು.

ಡಾ.ಸಿ.ಸೋಮಶೇಖರ್‌ ಅವರು ಮಂಗಳವಾರ ತಿರುವನಂತಪುರದಲ್ಲಿ ಕಾಸರಗೋಡು ಶಾಸಕ ಎನ್‌.ಎ.ನೆಲ್ಲಿಕುನ್ನು ಅವರ ಜತೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಕಾಸರಗೋಡಿನ ಕನ್ನಡಿಗರ ಸಮಸ್ಯೆಗಳ ಕುರಿತು ವಿಶೇಷವಾಗಿ ಕನ್ನಡ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಚರ್ಚಿಸಲಾಯಿತು. ಅಲ್ಲದೆ, ಕಾಸರಗೋಡು ಜಿಲ್ಲೆಯಲ್ಲಿ ಕನ್ನಡದ ಹೆಸರುಗಳ ಸ್ಥಳ ನಾಮಗಳನ್ನು ಮಲಯಾಳ ಭಾಷೆಗೆ ಬದಲಾಯಿಸಿರುವುದನ್ನು ತಡೆಹಿಡಿಯುವಂತೆ ಮನವಿ ಮಾಡಲಾಗಿದೆ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಕಾಸರಗೋಡಿನಲ್ಲಿ ಕಯ್ಯಾರ ಕಿಞ್ಞಣ್ಣ ರೈ ಹೆಸರಿನಲ್ಲಿ ಕನ್ನಡ ಭವನ ವನ್ನು ನಿರ್ಮಾಣ ಮಾಡಲು ಕರ್ನಾಟಕದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುದಾನ ಒದಗಿಸಿದ್ದು ಈ ಯೋಜನೆಗೆ ಕೇರಳ ಸರ್ಕಾರ ಸಹಕಾರ ನೀಡಬೇಕು ಎಂದು ವಿನಂತಿಸಿದರು.

ಕಳೆದ ಬಜೆಟ್‌ನಲ್ಲಿ ಕೇರಳ ಸರಕಾರ ಕಯ್ಯಾರ ಕಿಞ್ಞಣ್ಣ ರೈ ಅವರ ಹೆಸರಿನಲ್ಲಿ ಸಾಹಿತ್ಯ ಅಕಾಡೆಮಿ ಪ್ರಾರಂಭಿಸುವ ಘೋಷಣೆ ಮಾಡಿದ್ದ ಕೇರಳ ಮುಖ್ಯ ಮಂತ್ರಿ ಪಿಣರಾಯಿ ವಿಜಯನ್‌ ಅವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಮನವಿಯನ್ನು ಸ್ವೀಕರಿಸಿದ ಕೇರಳ ಮುಖ್ಯ ಮಂತ್ರಿಗಳು ನಾವು ಸಲ್ಲಿಸಿದ ಕಾಸರಗೋಡು ಕನ್ನಡಿಗರ ಬೇಡಿಕೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದರು ಹಾಗೂ ಕರ್ನಾಟಕ ಹಾಗೂ ಕೇರಳದ ಮಧ್ಯೆ ಉತ್ತಮ ಬಾಂಧವ್ಯ ಹಾಗೂ ಸಾಮರಸ್ಯವಿರುವುದಾಗಿ ಡಾ.ಸಿ.ಸೋಮಶೇಖರ್‌  ತಿಳಿಸದ್ದಾರೆ.

ಮಂಜೇಶ್ವರದ ಶಾಸಕ ಅಶ್ರಫ್ ಅವರ ಸಹಕಾರದೊಂದಿಗೆ ಮಾನ್ಯ ಮುಖ್ಯಮಂತ್ರಿ ಭೇಟಿ ಸಾಧ್ಯವಾಯಿತು ಎಂದು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ  ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ತಿಳಿಸಿದ್ದಾರೆ.

Sneha Gowda

Recent Posts

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

18 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

19 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

31 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

34 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

56 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

1 hour ago