News Karnataka Kannada
Thursday, April 25 2024
ಕಾಸರಗೋಡು

ಭೂಕುಸಿತ: ಪಾಣತ್ತೂರು – ಕಲ್ಲಪಳ್ಳಿ – ಸುಳ್ಯ ಅಂತಾರಾಜ್ಯ ರಸ್ತೆಯಲ್ಲಿ ರಾತ್ರಿ ಸಂಚಾರ ನಿಷೇಧ

Landslide: Night traffic banned on Panathur-Kallapalli-Sullia inter-state road
Photo Credit : By Author

ಕಾಸರಗೋಡು: ಭಾರೀ ಮಳೆ ಹಿನ್ನಲೆಯಲ್ಲಿ ಪನತ್ತಡಿ ಬೆಟ್ಟೊಳಿಯಲ್ಲಿ ಭೂಕುಸಿತ ಉಂಟಾದ ಹಿನ್ನೆಯಲ್ಲಿ ಪಾಣತ್ತೂರು – ಕಲ್ಲಪಳ್ಳಿ – ಸುಳ್ಯ ಅಂತಾರಾಜ್ಯ  ರಸ್ತೆಯಲ್ಲಿ ರಾತ್ರಿ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಜಿಯೋಲಾಜಿಸ್ಟ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇನ್ನಷ್ಟು ಭೂಕುಸಿತಕ್ಕೆ ಕಾರಣ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸಂಚಾರ ನಿರ್ಬಂಧಿಸಿ ಆದೇಶ ನೀಡಲಾಗಿದೆ. ವೆಳ್ಳರಿಕುಂಡು ತಹಶೀಲ್ದಾರ್ ನೀಡಿದ ವರದಿಯಂತೆ ಮುಂದಿನ ಕ್ರಮ ತೆಗೆದುಕೊಳ್ಳಲಾಗಿದೆ.

ಈ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬಿರುಕು ಬಿಟ್ಟ ಗುಡ್ಡ, ಅವಘಡಕ್ಕೆ ಕಾರಣವಾಗಿರುವ ಮಣ್ಣು ಮೊದಲಾದವುಗಳನ್ನು ಪೂರ್ಣವಾಗಿ ತೆರವುಗೊಳಿಸಿದ ಬಳಿಕ ಸಂಚಾರಕ್ಕೆ ಪೂರ್ಣ ವಾಗಿ ಮುಕ್ತಗೊಳಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿವಾರಣಾ ಪ್ರಾಧಿಕಾರ ಅಧ್ಯಕ್ಷರಾಗಿರುವ . ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ರಸ್ತೆ ಮೇಲೆ ಬಿದ್ದಿರುವ ಮಣ್ಣು, ಕಲ್ಲುಗಳನ್ನು ತೆರವು ಗೊಳಿಸಿದ ಬಳಿಕ ಹಗಲು ಸಮಯ ನಿಯಂತ್ರಣಗಳೊಂದಿಗೆ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಸ್ಥಳದಲ್ಲಿ ಪೊಲೀಸ್ ಮೊಕ್ಕಾ೦ ಹೂಡಲಾಗಿದೆ. ಪ್ರಯಾಣಿಕರು ಹಾಗೂ ಪರಿಸರವಾಸಿಗಳು ಮುನ್ನಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು