ನಾಲ್ಕು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

ಕಾಸರಗೋಡು: ನಾಲ್ಕು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸಹೋದರ ಹಾಗೂ ಸಂಬಂಧಿಕರೋರ್ವರ ಬೆದರಿಕೆ ಇದ್ದುದರಿಂದ ತಪ್ಪಿಸಿಕೊಂಡಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಧರ್ಮತ್ತಡ್ಕದ ಜೋನ್ ಡಿ’ಸೋಜ (60) ನಾಪತ್ತೆಯಾಗಿದ್ದ ವ್ಯಕ್ತಿ. ಇವರು ಸೋಮವಾರ ಕಾಸರಗೋಡು ಪ್ರಥಮ ದರ್ಜೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಇವರ ಹೇಳಿಕೆಯಂತೆ ಸಹೋದರ ಜೋರ್ಜ್ ಹಾಗೂ ಸಂಬಂಧಿಕ ಥೋಮಸ್ ವಿರುದ್ಧ ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಕಳೆದ ಗುರುವಾರ ದಂದು ಜೋನ್ ಡಿಸೋಜ ನಾಪತ್ತೆಯಾಗಿದ್ದರು.

ಇವರ ಮೊಬೈಲ್ ಫೋನ್ ಮತ್ತು ಸ್ಕೂಟರ್ ಉಪ್ಪಳ ನಯಬಜಾರ್ ಬಳಿಯ ಅಂಬಾರ್ ಎಂಬಲ್ಲಿ ಪತ್ತೆಯಾಗಿದೆ. ಪೆರ್ಮುದೆ ತೆರಳುವುದಾಗಿ ಗುರುವಾರದಂದು ತೆರಳಿದ್ದ ಇವರು ನಾಪತ್ತೆಯಾಗಿರುವುದಾಗಿ ಪತ್ನಿ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದ್ದರು. ಆಸ್ತಿ ವಿವಾದ ಇವರ ನಡುವೆ ವೈಮನಸ್ಸಿಗೆ ಕಾರಣ ಎನ್ನಲಾಗಿದೆ.

Gayathri SG

Recent Posts

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

42 seconds ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

15 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

30 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

31 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

58 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

1 hour ago