ಕಾಸರಗೋಡು: ಬೈಕ್ ಗೆ ಡಿಕ್ಕಿ ಹೊಡೆದ ಟೋರಸ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ತಂಗುದಾಣಕ್ಕೆ ನುಗ್ಗಿದ ಘಟನೆ ನೀರ್ಚಾಲ್ ನಲ್ಲಿ ನಡೆದಿದ್ದು, ಬೈಕ್ ಸವಾರ ಪ್ರಾಣಾಪಾಯದಿಂದ ಪವಾಡ ಸದೃಶವಾಗಿ ಪಾರಾಗಿದ್ದಾರೆ. ನೀರ್ಚಾಲ್ ನಲ್ಲಿರುವ ಬೇಳ ಗ್ರಾಮ ಕಚೇರಿ ಸಮೀಪ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ.
ಬೈಕ್ ಸವಾರ ಬಿ.ಎಂ ಅಬ್ಬಾಸ್ ಪಾರಾದ ಬೈಕ್ ಸವಾರ. ಬಿರ್ಮಿನಡ್ಕದಿಂದ ನೀರ್ಚಾಲ್ ಗೆ ಬರುತ್ತಿದ್ದ ಬೈಕ್ ಹಾಗೂ ನೀರ್ಚಾಲ್ ನಿಂದ ಮಾನ್ಯ ಕಡೆಗೆ ತೆರಳುತ್ತಿದ್ದ ಲಾರಿ ಬೇಳ ಗ್ರಾಮ ಕಚೇರಿ ಸಮೀಪ ಸಂಪರ್ಕ ರಸ್ತೆ ಬಳಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಬಸ್ಸು ತಂಗುದಾಣದೊಳಗೆ ನುಗ್ಗಿದೆ. ಡಿಕ್ಕಿಯ ರಭಸಕ್ಕೆ ಶೆಡ್ ನೆಲ ಕಚ್ಚಿದೆ.
ಈ ಸಂದರ್ಭದಲ್ಲಿ ತಂಗುದಾಣದೊಳಗೆ ಪ್ರಯಾಣಿಕರಾರು ಇಲ್ಲದಿದ್ದುದರಿಂದ ಭಾರೀ ಅಪಾಯ ತಪ್ಪಿದೆ ಎನ್ನಬಹುದು. ಬೈಕ್ ನ್ನು ಲಾರಿ ಎಳೆದು ಕೊಂಡು ಹೋಗಿದ್ದು, ಅಬ್ಬಾಸ್ ಡಿಕ್ಕಿ ಹೊಡೆದ ಸಂದರ್ಭದಲ್ಲಿ ರಸ್ತೆಗೆ ಬಿದ್ದರೂ ಸಣ್ಣ ಪುಟ್ಟ ಗಾಯಾಗಳೊಂದಿಗೆ ಪಾರಾಗಿದ್ದಾರೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ