ಕಾಸರಗೋಡು: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜಿಲ್ಲೆಯ ಶಾಲೆಗಳಿಗೆ ಜುಲೈ 5ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಇಂಪಾಶೇಖರ್ ಆದೇಶ ಹೊರಡಿಸಿದ್ದಾರೆ.
ರಜೆ ಅಂಗನವಾಡಿ ಹಾಗೂ ಮದ್ರಸಗಳಿಗೆ ಅನ್ವಯವಾಗಲಿದೆ. ಕಾಲೇಜುಗಳಿಗೆ ರಜೆ ಅನ್ವಯಿಸುವುದಿಲ್ಲ. ಜುಲೈ 5ರಂದು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.