News Karnataka Kannada
Thursday, May 09 2024
ಕಾಸರಗೋಡು

ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Student drowns in water pond
Photo Credit : By Author

ಕಾಸರಗೋಡು: ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೀಲೇಶ್ವರ ಬಂಗಳದಲ್ಲಿ ಸೋಮವಾರ ಸಂಜೆ ನಡೆದಿದೆ.

ಬಂಗಳ ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಮೃತಪಟ್ಟವನು. ಸೋಮವಾರ ಸಂಜೆ ಸಹಪಾಠಿಗಳ ಜೊತೆ ಮನೆ ಸಮೀಪದ ಗಣಿಗಾರಿಕೆ ನಡೆಸಿದ್ದ ಸ್ಥಳದಲ್ಲಿ ಹೊಂಡದಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ದುರಂತ ನಡೆದಿದೆ.

ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿಗಾಗಿ ಶೋಧ ನಡೆಸಿದರೂ ಪತ್ತೆಯಾಗಲಿಲ್ಲ. ಮಂಗಳವಾರ ಬೆಳಿಗ್ಗೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಕಣ್ಣೂರಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ಕಣ್ಣೂರಿ ನಿಂದ ಆಗಮಿಸಿದ ಮುಳುಗು ತಜ್ಞರು ಶೋಧ ನಡೆಸಿ ಮೃತ ದೇಹವನ್ನು ಮೇಲಕ್ಕೆತ್ತಿದರು. ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿರಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು