ಕಾಸರಗೋಡು: ನಗರದ ಎರಡು ಮಳಿಗೆಗಳು ಅಗ್ನಿಗಾಹುತಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಸುಮಾರು 15 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ನಗರದ ಹಳೆ ಬಸ್ಸು ನಿಲ್ದಾಣ ಸಮೀಪದ ಸರಕು ಸಾಮಾಗ್ರಿ ಹಾಗೂ ಮೊಬೈಲ್ ಹಾಗೂ ವಾಚ್ ವರ್ಕ್ಸ್ ಮಳಿಗೆಯಲ್ಲಿ ಈ ಅನಾಹುತ ನಡೆದಿದೆ. ಮೊಬೈಲ್ ಮಳಿಗೆಯಲ್ಲಿ ಉಂಟಾದ ಅನಾಹುತದಿಂದ ಮೂರು ಲಕ್ಷ ರೂ. ಹಾಗೂ ಸರಕು ಸಾಮಾಗ್ರಿ ಮಳಿಗೆಯಲ್ಲಿ ಸುಮಾರು 12 ಲಕ್ಷ ರೂ. ನಷ್ಟ ಉಂಟಾಗಿರುವುದಾಗಿ ಅಂದಾಜಿಸಲಾಗಿದೆ. ಕಾಸರಗೋಡಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಶಾರ್ಟ್ ಸರ್ಕ್ಯೂಟ್ ಅನಾಹುತಕ್ಕೆ ಕಾರಣ ಎನ್ನಲಾಗಿದೆ.