News Karnataka Kannada
Thursday, May 02 2024
ಕರಾವಳಿ

ಬಂಟ್ವಾಳ: ಪೆಟ್ರೋಲ್ ಸುರಿದು ಬಂಟ್ವಾಳದ ವ್ಯಕ್ತಿಯ ಬರ್ಬರ ಹತ್ಯೆ

Death News
Photo Credit :

ಬಂಟ್ವಾಳ: ಮೂಡಿಗೆರೆಯಲ್ಲಿ ಬಂಟ್ವಾಳದ ವ್ಯಕ್ತಿಯೋರ್ವರನ್ನು ಪೆಟ್ರೋಲ್ ಸುರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವರದಿಯಾಗಿದೆ. ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ಬಾಸ್ ಅವರ ಪುತ್ರ ಫವಾಜ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊಲೆಯ ಹಿಂದೆ ಗಾಂಜಾ ವಹಿವಾಟು ಇರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಫವಾಜ್ ಎಂಬಾತನನ್ನು ಆರೋಪಿಗಳು ಪೆಟ್ರೋಲ್ ಸುರಿದು ಕೊಲೆ ಮಾಡಿದ ಬಳಿಕ ಚಿಕ್ಕಮಗಳೂರು ಮೂಡಿಗೆರೆಯ ಬಣಕ್ಕಲ್ ಎಂಬಲ್ಲಿ ಗುಡ್ಡದಲ್ಲಿ ಬಿಸಾಡಿ ಹೋಗಿದ್ದಾರೆ ಎನ್ನಲಾಗುತ್ತಿದೆ. ಫಯಾಜ್ ಅವರು ಮದುವೆಯಾಗಿದ್ದು, ಬಳಿಕ ಪತ್ನಿಯಿಂದ ದೂರವಿದ್ದರು. ಈತ ಗಾಂಜ ಮಾರಾಟ ದಂಧೆಯಲ್ಲಿ ತೊಡಗಿದ್ದಲ್ಲದೆ, ಗಾಂಜಾ ವ್ಯಸನಿಯಾಗಿದ್ದ ಎಂದು ಹೇಳಲಾಗಿದೆ. ಒಳ್ಳೆಯ ಕುಟುಂಬದ ಯುವಕನಾಗಿದ್ದ ಈತನ ಕೆಟ್ಟ ಬುದ್ದಿಯಿಂದ ಬೇಸೆತ್ತ ಮನೆಯವರು ಇವನನ್ನು ಮನೆಯಿಂದ ಹೊರಹಾಕಿದ್ದರು ಎನ್ನಲಾಗಿದೆ.

ಗಾಂಜಾ ವಹಿವಾಟು ಜೋರಾಗಿ ನಡೆಸುತ್ತಿದ್ದ ಈತನಿಗೆ ಗಾಂಜಾ ಪೆಡ್ಲರ್ ಗಳ ಜೊತೆ ಅತಿಯಾದ ಸಂಪರ್ಕವಿತ್ತು ಎಂದು ಆರೋಪಿಸಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇವರೊಳಗೆ ಹಣಕಾಸಿನ ಅಥವಾ ಗಾಂಜಾ ವಿಚಾರದಲ್ಲಿ ವೈಮಸ್ಸು ಉಂಟಾಗಿ ಈತನನ್ನು ಸುಮಾರು ಹತ್ತು ದಿನಗಳ ಹಿಂದೆ ಇರಾದಿಂದ ಕಿಡ್ನಾಪ್ ಮಾಡಿದ್ದರು. ಬಳಿಕ ಯಾವುದೋ ಅಜ್ಞಾತ ಸ್ಥಳದಲ್ಲಿ ಈತನನ್ನು ಕೂಡಿ ಇಟ್ಟು ಪೆಟ್ರೋಲ್ ಸುರಿದು ಕೊಲೆ ಮಾಡಲಾಗಿದೆ. ಕೊಲೆ ಮಾಡಿ ಬಣಕ್ಕಲ್ ಎಂಬಲ್ಲಿ ಗುಡ್ಡದಲ್ಲಿ ಬಿಸಾಡಿದ್ದಾರೆ. ವಗ್ಗ ಅಥವಾ ಕಾವಳಕಟ್ಟೆ ಮೂಲದ ಯುವಕರು ಈತನ ಕೊಲೆಯ ಹಿಂದೆ ಇರುವ ಆರೋಪಿಗಳು ಎಂಬ ಮಾಹಿತಿ ಪೋಲೀಸ್ ಇಲಾಖೆ ಲಭ್ಯವಾಗಿದೆ. ಸ್ನೇಹಿತ ಗಾಂಜಾ ವ್ಯಸನಿಗಳಿಗೆ ಈತನಕಿಡ್ನಾಪ್ ಬಗ್ಗೆ ಮಾಹಿತಿ ಇತ್ತು ಎನ್ನಲಾಗಿದ್ದು, ಸ್ನೇಹಿತರೇ ಈತನ ಕೊಲೆ ಮಾಡಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದ್ದು ಆರೋಪಿಗಳ ಪತ್ತೆಗಾಗಿ ಪೋಲೀಸರು ಬಲೆ ಬೀಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು