Categories: ಕರಾವಳಿ

ವಿಶ್ವ ಕೊಂಕಣಿ ಕೇಂದ್ರದಲ್ಲಿ ಮೈಕಲ್ ಡಿ ಸೊಜಾ ವಿಶನ್ ಕೊಂಕಣಿ ಪುಸ್ತಕ ಕಾರ್ಯಕ್ರಮ

ಮಂಗಳೂರು:   “ಲೇಖಕರು ವೈಜ್ಞಾನಿಕ ಮನೋಭಾವ, ತಾರ್ಕಿಕತೆ ಮತ್ತು ಸಂವೇದನಾಶೀಲತೆಯನ್ನು ಮೈಗೂಡಿಸಿಕೊಂಡರೆ ಮಾತ್ರ ಉತ್ತಮ ಸಾಹಿತ್ಯ ಕೃ ತಿ ರಚಿಸಲು ಸಾಧ್ಯ. 25 ಮಿಲಿ ಸುಗಂದ ದ್ರವ್ಯ ತಯಾರಿಸಲು ಸಾವಿರಾರು ಹೂವಿನ ಪಕಳೆಗಳನ್ನು ಅರೆಯಬೇಕಾಗುತ್ತದೆಯೋ ಹಾಗೆ ಒಂದು ಸಾಹಿತ್ಯ ಕೃತಿ ರಚನೆಯ ಹಿಂದೆ ಸಾವಿರಾರು ಪುಟಗಳ ಓದು, ಅಭ್ಯಾಸ ಇರುತ್ತದೆ.” ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಗೋವಾದ ಹಿರಿಯ ಸಾಹಿತಿ ಶ್ರೀ ದತ್ತಾ ದಾಮೋದರ ನಾಯಕ್ ಅಭಿಪ್ರಾಯಪಟ್ಟರು.

ಶ್ರೀ ದತ್ತಾ ನಾಯಕ್ ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ನಡೆದ ಮೈಕಲ್ ಡಿ ಸೊಜಾ ವಿಶನ್ ಕೊಂಕಣಿ ಪುಸ್ತಕ ಪ್ರಕಟಣೆ ಯೋಜನೆಯಡಿ ಆಯ್ಕೆಯಾದ ಲೇಖಕರ ಬಳಗವನ್ನು ಉದ್ದೇಶಿಸಿ ಮಾತನಾಡುತ್ತಿದರು.

ಮುಂದುವರೆದು ಶ್ರೀ ದತ್ತಾ ನಾಯಕ್ ” ಬರವಣಿಗೆಯ ಭಾಷೆ ಸಾಧ್ಯವಾದಷ್ಟು ಸರಳ ಮತ್ತು ಹೃದ್ಯವಾದಾಗ ವಾಚಕನಿಗೆ ಓದುವ ಅನುಭೂತಿ ದಕ್ಕುತ್ತದೆ. ಅತಿಯಾದ ಅಲಂಕಾರ, ಸಾಂಕೇತಿಕತೆ, ಪ್ರತಿಮೆ – ಪ್ರತೀಕಗಳನ್ನು ಹೇರಿಕೊಂದು ರಚಿಸಿದ ಸಾಹಿತ್ಯ ಕೃತಿಯಿಂದ ಓದುಗರು ವಿಮುಖರಾಗುವ ಸಾಧ್ಯತೆಗಳು ಹೆಚ್ಚು. ಓದುಗ ಪುಸ್ತಕ ಓದುವುದು ಅವನ ಸುಖಕ್ಕಾಗಿ ಹೊರತು ನಮಗಾಗಿ ಅಲ್ಲ ಎಂಬುದನ್ನು ಪುಸ್ತಕ ಲೇಖಕರೂ, ಪ್ರಕಾಶಕರೂ ಅರ್ಥ ಮಾಡಿಕೊಳ್ಳಬೇಕು. ಒಂದು ಉತ್ತಮ ಪುಸ್ತಕ ರೂಪಿಸುವಲ್ಲಿ ಪ್ರಕಾಶಕನ ಕೆಲಸವೂ ಗಮನಾರ್ಹ. ಪುಸ್ತಕ ಪ್ರಕಾಶನವೆಂದರೆ ಅದು ಬರೀ ಪ್ಯಾಕೆಜಿಂಗ್ ಕೆಲಸ ಮಾತ್ರವಲ್ಲ” ಎಂದು ಉಪಸ್ಥಿತರಿದ್ದ ಲೇಖಕ – ಪ್ರಕಾಶಕರಿಗೆ ತಮ್ಮ ಸ್ವಂತ ಅನುಭವಗಳನ್ನು ಹಂಚಿಕೊಳ್ಳು ವುದರ ಮೂಲಕ ದತ್ತಾ ನಾಯಕ್ ಸಲಹೆ ನೀಡಿದರು.

ವಿಶ್ವ ಕೊಂಕಣಿ ಕೇಂದ್ರದ ಸ್ಥಾಪಕ ಬಸ್ತಿ ವಾಮನ್ ಶೆಣೈಯವರ ಪ್ರತಿಮೆಗೆ ಹಾರಾರ್ಪಣೆ ಮತ್ತು ದೀಪ ಪ್ರಜ್ವಲನೆಯ ಮೂಲಕ ಆರಂಭವಾದ ಕಾರ್ಯಕ್ರಮದಲ್ಲಿ ಪತ್ರಕರ್ತ ಎಚ್ಚೆಮ್ ಪೆರ್ನಾಲ್ ಅಧ್ಯಕ್ಷತೆಯಲ್ಲಿ ನಡೆದ “ಪುಸ್ತಕ ಪಂಚಾತಿಕೆ” ಎಂಬ ಸಂವಾದ ಕಾರ್ಯಕ್ರಮ ನಡೆಯಿತು. ಹಿರಿಯ ಲೇಖಕರಾದ ಶ್ರೀಮತಿ ಶಕುಂತಲಾ ಆರ್. ಕಿಣಿ, ಶ್ರೀ ಎಡ್ಡಿ ಸಿಕ್ವೇರಾ ಲೇಖಕರ ಪರವಾಗಿ, ಪಯ್ಯನ್ನೂರು ರಮೇಶ ಪೈ ಮತ್ತು ಸಂತ ಅಲೋಶಿಯಸ್ ಪ್ರಕಾಶನದ ನಿರ್ದೇಶಕಿ ಡೊ| ವಿದ್ಯಾ ವಿನುತ ಡಿಸೊಜ ಪ್ರಕಾಶಕರ ಪರವಾಗಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಪುಸ್ತಕ ಪ್ರಕಾಶನ ಮತ್ತು ಮಾರಾಟ ವ್ಯವಸ್ಥೆಯಲ್ಲಿ ಲೇಖಕ ಮತ್ತು ಪ್ರಕಾಶಕರ ಜವಾಬ್ದಾರಿ, ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಲಭ್ಯವಿರುವ ಪರಿಹಾರ ಮಾರ್ಗೋಪಾಯಗಳ ಕುರಿತು ಸಂವಾದದಲ್ಲಿ ಮುಖ್ತವಾಗಿ ಚರ್ಚಿಸಲಾಯಿತು.

ವಿಶ್ವ ಕೊಂಕಣಿ ಮೈಕಲ್ ಡಿ ಸೊಜಾ ವಿಶನ್ ಕೊಂಕಣಿ ಪುಸ್ತಕ ಪ್ರಾಧಿಕಾರದ ಸಂಪಾದಕ ಮಂಡಳಿ ಸದಸ್ಯ ಕವಿ/ ಚಿಂತಕ ಟೈಟಸ್ ನೊರೊನ್ಹಾ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸುವುದರ ಜೊತೆಗೆ ಮೈಕಲ್ ಡಿ ಸೊಜಾ ವಿಶನ್ ಕೊಂಕಣಿ ಕಾರ್ಯಕ್ರಮದ ಕುರಿತು ವಿಸ್ತಾರ ಮಾಹಿತಿಯನ್ನು ನೀಡಿದರು. ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗ ಮುಖ್ಯಸ್ಥ ಹಾಗೂ ಸಂಪಾದಕ ಮಂಡಳಿ ಸದಸ್ಯ ಕವಿ ಮೆಲ್ವಿನ್ ರೊಡ್ರಿಗಸ್ ಪುಸ್ತಕ ಅನುದಾನಕ್ಕೆ ಆಯ್ಕೆಯಾದ ಕೃತಿ ಮತ್ತು ಲೇಖಕರ ಹೆಸರುಗಳ ಘೋಷಣೆ ಮಾಡಿದರು. ಗೋವಾ, ಮಹಾರಾಷ್ಟ್ರ, ಕರ್ನಾಟಕ ಮಾತ್ರವಲ್ಲ ದೂರದ ಆಸ್ಟ್ರೇಲಿಯಾದಿಂದಲೂ ಕೊಂಕಣಿ ಸಾಹಿತಿಗಳ 21 ಕೃತಿಗಳು ಅನುದಾನಕ್ಕೆ ಆಯ್ಕೆಯಾಗಿದ್ದು, ಸಾಹಿತಿಗಳು ಮತ್ತು ಅವರ ಪ್ರತಿನಿಧಿಗಳು ಹಾಜರಿದ್ದು ಪ್ರಸ್ತಾಪಕ್ಕೆ ಸಹಿ ಮಾಡಿದರು.

ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷರೂ, ಮೈಕಲ್ ಡಿ ಸೊಜಾ ವಿಶನ್ ಕೊಂಕಣಿ ಕಾರ್ಯಕ್ರಮದ ನಿರ್ದೇಶಕರೂ ಆಗಿರುವ ಸಿ.ಎ. ನಂದಗೋಪಾಲ ಶೆಣೈ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ” ಕೊಂಕಣಿ ಸಾಹಿತ್ಯಕ್ಕೆ ಉತ್ತೇಜನ ನಿಡುವುದು ಮತ್ತು ಆ ಮೂಲಕ ಕೊಂಕಣಿ ಭಾಷಾ ಸೇವೆ ಮಾಡುವುದು ವಿಶ್ವ ಕೊಂಕಣಿ ಕೇಂದ್ರದ ಮೂಲ ಉದ್ದೇಶಗಳಲ್ಲಿ ಒಂದು. ಮೈಕಲ್ ಡಿ ಸೊಜಾ ವಿಶನ್ ಕೊಂಕಣಿ ಕಾರ್ಯಕ್ರಮದ ಮೂಲಕ ಈ ಉದ್ದೇಶವನ್ನು ಈಡೇರಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದು ವಿಶ್ವ ಕೊಂಕಣಿ ಕೇಂದ್ರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದ್ದು ಈ ಕಾರ್ಯಕ್ರಮ ನೂರು ಪುಸ್ತಕ ಪ್ರಕಟಣೆಗೆ ಸೀಮಿತಗೊಳಿಸುವುದಿಲ್ಲ, ಮುಂದುವರೆಸಿಕೊಂಡು ಹೋಗುತ್ತೇವೆ ” ಎಂದು ಭರವಸೆ ನೀಡಿದರು.

ವಿಶ್ವ ಕೊಂಕಣಿ ಕೇಂದ್ರದ ಉಪಾಧ್ಯಕ್ಷ ಶ್ರೀ ಗಿಲ್ಬರ್ಟ್ ಡಿ ಸೊಜಾ ವಂದಿಸಿದರು. ಶ್ರ‍ೀಮತಿ ಸುಚಿತ್ರಾ ಎಸ್. ಶೆಣೈ ಅಚ್ಚುಕಟ್ಟಾಗಿ ಕಾರ್ಯಕ್ರಮ ನಿರೂಪಿಸಿದರು.

ವಿಶ್ವ ಕೊಂಕಣಿ ಕೇಂದ್ರದ ವಿಶ್ವಸ್ಥರಾದ ವಿಲಿಯಮ್ ಡಿ ಸೊಜಾ, ಡಾ| ಕಸ್ತೂರಿ ಮೋಹನ್ ಪೈ, ಖಜಾಂಜಿ ಬಿ. ಆರ್. ಭಟ್ ಮತ್ತು ಕಾರ್ಯ ನಿರ್ವಹಣಾ ಅಧಿಕಾರಿ ಡಾ| ಬಿ. ದೇವದಾಸ ಪೈ ಈ ಸಂದರ್ಭದಲ್ಲಿ ಹಾಜರಿದ್ದರು.

 

 

Nisarga K

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago