Categories: ಕರಾವಳಿ

ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸೋಣ: ಇನಾಯತ್ ಅಲಿ

ಗುರುಪುರ: ಇಲ್ಲಿನ ಕೈಕಂಬ ಮೆಘಾ ಫ್ಲಾಝಾ ಸಭಾಂಗಣದಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರ ಬೆನ್ನೆಲುಬಾಗಿ ಸದಾ ನಾನಿರುತ್ತೇನೆ, ಕ್ಷೇತ್ರದಲ್ಲಿ ನಮ್ಮ ಸೋಲಿನ ಬಗ್ಗೆ ಪರಾಮರ್ಶೆ ಮಾಡಿ ಬೂತ್ ಮಟ್ಟದಲ್ಲಿ ಜೊತೆಯಾಗಿ ಮತ್ತೆ ಪಕ್ಷ ಸಂಘಟಿಸುವ ಕೆಲಸ ಮಾಡೋಣ. ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಐತಿಹಾಸಿಕ ಗ್ಯಾರಂಟಿ ಯೋಜನೆಗಳನ್ನು ಕ್ಷೇತ್ರದ ಮನೆ ಮನೆಗೆ ತಲುಪಿಸಲು ಮಾರ್ಗಸೂಚಿ ತಯಾರಿ ನಡೆಯುತ್ತಿದ್ದು, ಇದರ ಪರಿಪೂರ್ಣ ಅನುಷ್ಠಾನಕ್ಕೆ ಕಾರ್ಯಕರ್ತರು ಕೂಡ ಕೈಜೋಡಿಸಬೇಕು ಎಂದು ಅವರು ಹೇಳಿದರು.

ಗುರುಪುರ ಬ್ಲಾಕ್, ವಲಯ, ಬೂತ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿ ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಗುರುಪುರ ಬ್ಲಾಕ್ ಅಧ್ಯಕ್ಷ ಸುರೇಂದ್ರ ಕಂಬಳಿ, ಯು.ಪಿ.ಇಬ್ರಾಹಿಮ್, ಗಿರೀಶ್ ಆಳ್ವ, ಸುಹೈಲ್ ಕಂದಕ್, ಪ್ರಥ್ವಿರಾಜ್ ಆರ್.ಕೆ, ಬಾಷ ಗುರುಪುರ, ಕೃಷ್ಣ ಅಮೀನ್, ವಿನಯ ಶೆಟ್ಟಿ, ನೂರ್ ಮೊಹಮ್ಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Umesha HS

Recent Posts

ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ

ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಕರ್ನಾಟಕ ಮಾತ್ರವಲ್ಲದೆ ತಮಿಳುನಾಡಿಗೆ ಚಂಡಮಾರುತ ಹಾಗೂ…

3 mins ago

ಇವಿಎಂ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟ

ಇವಿಎಂ‌ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟಗೊಂಡ ಘಟನೆ ಕೋಲಾರದ ವಡಗೂರ್ ಗೇಟ್ ಬಳಿ ನಡೆದಿದೆ. ಮುಳಬಾಗಿಲಿನಿಂದ ಕೋಲಾರದ‌ ಸ್ಟ್ರಾಂಗ್…

18 mins ago

ಮತ್ತೆ ತಾಳ ತಪ್ಪಿದ “ಶ್ರುತಿ” ಹಾಸನ್ ಲೈಫ್

ಕಮಲ್​ ಹಾಸನ್​ ಪುತ್ರಿ ಶ್ರುತಿ ಹಾಸನ್ ತಮ್ಮ ಬಹು ಕಾಲದ ಗೆಳೆಯನಿಂದ ದೂರ ಉಳಿದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಗೂಗಲ್​…

32 mins ago

ಭಾರತ ಮೂಲದ 3 ಕಂಪನಿಗಳು ಸೇರಿದಂತೆ 12ಕ್ಕೂ ಹೆಚ್ಚು ಸಂಸ್ಥೆಗಳಿಗೆ ಅಮೆರಿಕ ನಿರ್ಬಂಧ

ಇರಾನ್ ಜೊತೆ ವಹಿವಾಟು ಹೊಂದಿರುವ ಆರೋಪದ ಮೇರೆಗೆ ಭಾರತ ಮೂಲದ 3 ಕಂಪನಿಗಳು ಸೇರಿದಂತೆ 12ಕ್ಕೂ ಹೆಚ್ಚು ಸಂಸ್ಥೆಗಳಿಗೆ ಅಮೆರಿಕ…

45 mins ago

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಹಿಂದೇಟು: ಹೈಕೋರ್ಟ್ ತರಾಟೆ

ಕಳೆದ ತಿಂಗಳು ನ್ಯಾಯಾಂಗ ಬಂಧನದಲ್ಲಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

1 hour ago

ಕೇಂದ್ರ ದಿಂದ ‘ಕರ್ನಾಟಕ’ಕ್ಕೆ 3,454 ಕೋಟಿ ರೂ. ಬರಪರಿಹಾರ ಘೋಷಣೆ

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಬರ…

1 hour ago