ಮಂಗಳೂರು: ಸುರತ್ಕಲ್ ಮುಕ್ಕದಲ್ಲಿ ಸರ್ಕಾರಿ ಬಸ್ಗೆ ಹಿಂಬದಿಯಿಂದ ಬಂದ ಖಾಸಗಿ ಬಸ್ ಡಿಕ್ಕಿಯಾಗಿ 30 ಮಂದಿ ಗಾಯಗೊಂಡ ಘಟನೆ ನಡೆದಿದೆ. ಎರಡೂ ಬಸ್ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಈ ವೇಳೆ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಡಿಕ್ಕಿಯಾಗಿದೆ. ಈ ವೇಳೆ ಎರಡೂ ಬಸ್ಗಳಲ್ಲಿದ್ದ 30 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಎಲ್ಲರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.