Categories: ಕರಾವಳಿ

ಬಿಜೆಪಿ, ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಘರ್ಷಣೆ: ಮೂವರು ಕೈ ಕಾರ್ಯಕರ್ತರು, ಪೊಲೀಸರಿಗೆ ಗಾಯ

ಮಂಗಳೂರು: ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಪಕ್ಷದ ಬೂತ್ ಗೆ  ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್ ರೈ ಬಂದಾಗ ಕಾಂಗ್ರೆಸ್‌ ಕಾರ್ಯಕರ್ತರು ಜೈಕಾರ ಕೂಗಿದ್ದಾರೆ. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ಮಧ್ಯೆ ಹೋಯ್ ಕೈಯ್ ನಡೆದಿದೆ.  ಈ ಸಂದರ್ಭ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರ್‌ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಮೂವರು ಕಾಂಗ್ರೆಸ್‌ ಕಾರ್ಯಕರ್ತರು, ಪೊಲೀಸರಿಗೂ ಗಾಯ: ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್, ಮತದಾನ ಮುಗಿದ ಬಳಿಕ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿದೆ. ಪರಸ್ಪರ ಘೋಷಣೆ ಕೂಗಿದ ವೇಳೆ ಗಲಾಟೆ ಆಗಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ನಮ್ಮ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಿಣದಲ್ಲಿದ್ದು ಹೆಚ್ಚುವರಿ ಭದ್ರತೆ ಹಾಕಲಾಗಿದೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೂಡುಶೆಡ್ಡೆಯಲ್ಲಿ ಚೆಕ್ ಪೋಸ್ಟ್ ಹಾಕಿ ವಾಹನ ತಪಾಸಣೆ ನಡೆಸುತ್ತಿದ್ದೇವೆ. ಅಲ್ಲದೆ ಈ ಪ್ರದೇಶಕ್ಕೆ ಬರುವ ಹೊರಗಿನ ವಾಹನಗಳ ಮೇಲೆ ನಿಗಾ ಇಡಲಾಗುತ್ತದೆ ಎಂದು ತಿಳಿಸಿದ್ದಾರೆ.

 

Umesha HS

Recent Posts

ವಿವಾದಾತ್ಮಕ ಹೇಳಿಕೆ : ಶಾಸಕ ರಾಜು ಕಾಗೆಗೆ ಚುನಾವಣಾ ಇಲಾಖೆ ನೋಟಿಸ್‌

ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ‌…

7 hours ago

ಕಾರ್ತಿಕ್​ ಜಯರಾಮ್​ ಹುಟ್ಟುಹಬ್ಬ ಪ್ರಯುಕ್ತ ‘ದಿ ವೀರ್​’​ ಪೋಸ್ಟರ್ ಔಟ್‌

ಸ್ಯಾಂಡಲ್​ವುಡ್​ನ ಖ್ಯಾತ ನಟ ಕಾರ್ತಿಕ್​ ಜಯರಾಮ್​ ಅಲಿಯಾಸ್​ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

7 hours ago

ಕೊಳೆತ ಸ್ಥತಿಯಲ್ಲಿ ಮಹಿಳೆ ಮೃತ ದೇಹ ಪತ್ತೆ

ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…

8 hours ago

ವಿಜಯ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ ಅಮೀತ್ ಶಾಗೆ ಅದ್ದೂರಿ ಸ್ವಾಗತ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…

8 hours ago

ಫಾಲ್ಕೆ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪ್ರಶಸ್ತಿ ಪಡೆದ ‘ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ

ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…

8 hours ago

ಕಾಂಗ್ರೆಸ್ ಶಾಸಕನದ್ದು ಎನ್ನಲಾದ ಮತ್ತೊಂದು ಅಶ್ಲೀಲವಿಡಿಯೋ ವೈರಲ್‌

ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್‌ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಶಾಸಕರದ್ದು ಎನ್ನಲಾದ…

9 hours ago